ಪುನೀತ್ ರಾಜ್ಕುಮಾರ್ ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನೋವನ್ನು ಅನುಭವಿಸುತ್ತಿದೆ. ಇಂದು ಅವರನ್ನು ನೆನಪಿಸಿಕೊಳ್ಳೋಕೆ ‘ಪುನೀತ ನಮನ ಕಾರ್ಯಕ್ರಮ’ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಪುನೀತ್ ರಾಜ್ಕುಮಾರ್ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಅವರು ತಿಳಿಸಿದ್ದಾರೆ.
ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.
****