ಪುನೀತ್ ರಾಜ್‌ಕುಮಾರ್ ಅವರಿಗೆ ನಮನ ಸಲ್ಲಿಸುವ ಸಲುವಾಗಿ ಕನ್ನಡ ಚಿತ್ರರಂಗದ ಕಡೆಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ‘ಪುನೀತ್ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ ನಡೆಯಿತು. ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸೇರಿದಂತೆ ಇಡೀ ರಾಜ್ ಕುಟುಂಬ ಪಾಲ್ಗೊಂಡಿತ್ತು.
‘ಪುನೀತ ನಮನ’ ಕಾರ್ಯಕ್ರಮದ ಆರಂಭದಲ್ಲಿ ಪುನೀತ್ ಅವರ ಲೈಫ್ ಜರ್ನಿಯ ಹಿಸ್ಟ್ರಿಯನ್ನು ಭಾವುಕವಾಗಿ ಕಟ್ಟಿಕೊಡುವ ಪ್ರಯತ್ನ ಮಾಡಿತ್ತು. ಆ ವೀಡಿಯೋಗೆ ಕಿಚ್ಚ ಸುದೀಪ್ ಅವರ ಹಿನ್ನಲೆ ದ್ವನಿಯು ಕೂಡ ಅದ್ಭುತವಾಗಿತ್ತು. ಪ್ರತಿಯೊಬ್ಬರ ಕಣ್ಣಂಚಿನಲ್ಲಿ ನೀರು ತರಿಸುವಂತಿತ್ತು.
‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಕಿರಿಯ ಸಹೋದರ ಪುನೀತ್ ರಾಜ್‌ಕುಮಾರ್ ಅವರನ್ನು ನೆನೆದು ರಾಘವೇಂದ್ರ ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಕಣ್ಣೀರು ಹಾಕಿದ್ದರು. ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಪತಿಯನ್ನು ನೆನೆದು ಕಣ್ಣೀರಿಟ್ಟಿದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಇದೀಗ ಸಹೃದಯಿ ಅಭಿಮಾನಿ ದೇವರುಗಳಿಗೆ ಭಾವುಕ ಪತ್ರ ಬರೆದಿದ್ದಾರೆ.