22.9 C
Bengaluru
Sunday, March 26, 2023
spot_img

ಇಂದು(ನ 22) “ಸಕತ್” ಚಿತ್ರದ ಪ್ರೀ ರಿಲೀಸ್ ಇವೆಂಟ್

‘ಸಕತ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇಂದು (Nov 22) ಸಂಜೆ 6 ಗಂಟೆಗೆ ನಡೆಯಲಿದೆ, ಚಿತ್ರದ ಸಾಂಗ್ಸ್ ಮತ್ತು ಟ್ರೇಲರ್ ಸಿನಿ ಪ್ರೇಕ್ಷಕರಿಗೆ ಮೆಚ್ಚುಗೆಯಾಗಿದ್ದು ಗಣೇಶ್ ಅಭಿಮಾನಿಗಳು ಸಿನಿಮಾ ರಿಲೀಸ್ ಗಾಗಿ ಕಾಯುತ್ತಿದ್ದಾರೆ.

ಕೆವಿಎನ್​ ಪ್ರೊಡಕ್ಷನ್ಸ್​ ಬ್ಯಾನರ್​ನಲ್ಲಿ ತಯಾರಾಗಿರುವ, ಸಿಂಪಲ್ ಸುನಿ ನಿರ್ದೇಶನದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’  ಚಿತ್ರ ನವೆಂಬರ್ 26ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮೊದಲ ಬಾರಿಗೆ ಈ ಚಿತ್ರದಲ್ಲಿ ಕಣ್ಣು ಕಾಣದ ವ್ಯಕ್ತಿಯಾಗಿ ಗಣೇಶ್​ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗಷ್ಟೇ  ‘ಸಖತ್’ ಚಿತ್ರದ ‘ಸಖತ್ ಬಾಲು’ ಟೀಸರ್ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿತ್ತು. ಮೊದಲ ಬಾರಿಗೆ ಈ ಚಿತ್ರದಲ್ಲಿ ಕಣ್ಣು ಕಾಣದ ವ್ಯಕ್ತಿಯಾಗಿ ಗಣೇಶ್​ ಕಾಣಿಸಿಕೊಂಡಿದ್ದರು. ಕಚಗುಳಿ ಇಡುವ ಡೈಲಾಗ್​ಗಳು, ಭರ್ಜರಿ ಕಾಮಿಡಿ ಟೀಸರ್‌ನಲ್ಲಿತ್ತು. ಚಿತ್ರದಲ್ಲಿ ಗಣೇಶ್​ ಜೊತೆ ನಿಶ್ವಿಕಾ ನಾಯ್ಡು .ಸುರಭಿ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು .ಸಾಧು ಕೋಕಿಲ . ಗಿರಿ, ಧರ್ಮಣ್ಣ ಮುಂತಾದ ಕಲಾವಿದರ ತಾರಾಬಳಗ ಚಿತ್ರಕ್ಕಿದೆ.

ಕೆವಿಎನ್​ ಪ್ರೊಡಕ್ಷನ್ಸ್​ ಬ್ಯಾನರ್​ನಲ್ಲಿ ಈ ಸಿನಿಮಾ ತಯಾರಾಗಿದ್ದು,​ ನಿಶಾ ವೆಂಕಟ್​ ಕೋನಂಕಿ ಮತ್ತು ಸುಪ್ರಿತ್​ ಬಂಡವಾಳ ಹಾಕಿದ್ದಾರೆ. ಜೂಡಾ ಸ್ಯಾಂಡಿ ಸಂಗೀತ, ಶಾಂತ್​ ಕುಮಾರ್​ ಸಂಕಲನ ಮತ್ತು ಸಂತೋಷ್​ ರೈ ಪಾತಾಜೆ ಛಾಯಾಗ್ರಹಣ ‘ಸಖತ್’​ ಸಿನಿಮಾಗಿದೆ.

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles