17.8 C
Bengaluru
Saturday, December 10, 2022
spot_img

ಡಿಸೆಂಬರ್ 10 ಕ್ಕೆ ‘ಮಡ್ಡಿ’ 6 ಭಾಷೆಗಳಲ್ಲಿ ರಿಲೀಸ್..!

ಹೊಸ ಪ್ರತಿಭೆಗಳು ಮತ್ತು ಅನುಭವಿ ತಂತ್ರಜ್ಞರು ಒಟ್ಟು ಸೇರಿ ತಯಾರು ಮಾಡಿರುವ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಿಲೀಸ್ ಆಗಲು ಸಿದ್ಧವಾಗ್ತಿದೆ ಆಕ್ಷನ್ , ಥ್ರಿಲ್ಲರ್ ಸಸ್ಪೆನ್ಸ್ ಸಿನಿಮಾ ‘ಮಡ್ಡಿ’. ಈ ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಇದೇ ಡಿಸೆಂಬರ್ 10ಕ್ಕೆ ವಿಶ್ವದಾದ್ಯಂತ ಬಿಡುಗಡೆಗೊಳ್ಳಲಿದೆ.

ಪಿಕೆ7 ಪ್ರೊಡಕ್ಷನ್ಸ್ ಹೌಸ್ ಅಡಿಯಲ್ಲಿ ಪ್ರೇಮ್ ಕೃಷ್ಣ ದಾಸ್ ನಿರ್ಮಾಣದಲ್ಲಿ ಡಾ. ಪ್ರಗ್ಬಲ್ ದಾಸ್ ನಿರ್ದೇಶನದ ಮೊದಲ ಹೆಜ್ಜೆ. ಈ ಚಿತ್ರದ ಮೊದಲ ಟೀಸರ್ ಕೆಲ ತಿಂಗಳ ಹಿಂದಷ್ಟೇ  ಬಿಡುಗಡೆ ಆಗಿದ್ದು, ಅಭೂತಪೂರ್ವ ಮೆಚ್ಚುಗೆ ಪಡೆದುಕೊಂಡಿತ್ತು. ಈಗ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ. ಅದೇ ರೀತಿ ಚಿತ್ರಕ್ಕೆ ಒಟಿಟಿಯಿಂದಲೂ ಬೇಡಿಕೆ ಬಂದಿದ್ದು, ಒಟಿಟಿ ತ್ಯಜಿಸಿ ಚಿತ್ರಮಂದಿರದಲ್ಲಿಯೇ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಈ ಚಿತ್ರದ ಕಲಾವಿದರೆಲ್ಲ ಯಾವುದೇ ಡ್ಯೂಪ್ ಬಳಸದೆ ಹಲವು ಶೈಲಿಯ ಮಡ್​ ರೇಸ್ ​ನಲ್ಲಿ ಪರಿಣಿತಿ ಪಡೆದಿದ್ದಾರೆ. ಒಟ್ಟು 13 ಕ್ಯಾಮರಾಗಳನ್ನು ಶೂಟಿಂಗ್ನಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ರಾಕ್ಷಸನ್ ಸಿನಿಮಾ ಖ್ಯಾತಿಯ ಸ್ಯಾನ್​ ಲೋಕೇಶ್​ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ಕೆಜಿಎಫ್ ಸಿನಿಮಾ ಖ್ಯಾತಿಯ ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅದೇ ರೀತಿ ಹಾಲಿವುಡ್​ ಸಿನಿಮಾಗಳ ಛಾಯಾಗ್ರಹಣ ವಿಭಾಗದಲ್ಲಿ ಕೆಲಸ ಮಾಡಿರುವ ಕೆ.ಜಿ ರತೀಶ್​ ಈ ಸಿನಿಮಾಕ್ಕೆ ಕ್ಯಾಮರಾಮನ್ ಆಗಿದ್ದಾರೆ. ಕಲರಿಸ್ಟ್​ ಆಗಿ ರಂಗ ಕೆಲಸ ಮಾಡಿದ್ದಾರೆ.

ಕಳೆದ ಐದು ವರ್ಷಗಳ ಕಾಲ ಮಡ್ ರೇಸ್​ ಬಗ್ಗೆ ಅಧ್ಯಯನ ನಡೆಸಿ ಈ ಸಿನಿಮಾ ಮಾಡಿರುವ ಪ್ರಗ್ಬಲ್​, ಎರಡು ತಂಡಗಳ ನಡುವಿನ ಸ್ಪರ್ಧೆಯನ್ನು ಈ ಸಿನಿಮಾದಲ್ಲಿ ತೋರಿಸಿದ್ದಾರೆ. ಇದರ ಜತೆಗೆ ಫ್ಯಾಮಿಲಿ ಸೆಂಟಿಮೆಂಟ್, ಭಾವನಾತ್ಮಕ ಅಂಶಗಳು ಮತ್ತು ಅಡ್ವೆಂಚರಸ್​ ತಿರುವುಗಳನ್ನೂ ಈ ಸಿನಿಮಾದಲ್ಲಿ ಮಿಶ್ರಣ ಮಾಡಿದ್ದಾರೆ.

ಈ ಹಿಂದೆ ಚಿತ್ರದ ಮೋಷನ್ ಪೋಸ್ಟರ್ ಅನ್ನು ಕಾಲಿವುಡ್ ನಟ ವಿಜಯ್ ಸೇತುಪತಿ, ಕನ್ನಡದಲ್ಲಿ ಶ್ರೀಮುರಳಿ, ಬಾಲಿವುಡ್ ನಟ ಅರ್ಜುನ್ ಕಪೂರ್ ಬಿಡುಗಡೆ ಮಾಡಿದ್ದರು. ಅದಾದ ಬಳಿಕ ಹಲವು ಭಾಷೆಗಳ ಟೀಸರ್​ ಅನ್ನು ಶಿವರಾಜಕುಮಾರ್, ಫಹಾದ್ ಪಾಸಿಲ್, ಉನ್ನಿ ಮುಕುಂದನ್, ಅಪರ್ಣ ಬಾಲಮುರಳಿ ಸೇರಿ ಹಲವು ಸ್ಟಾರ್ ನಟರು ಬಿಡುಗಡೆ ಮಾಡಿದ್ದರು.

ನೈಜ ಅರಣ್ಯ ಪ್ರದೇಶದಲ್ಲಿ ಇಡೀ ಸಿನಿಮಾದ ಶೂಟಿಂಗ್ ಆಗಿದ್ದು, ಸಿಂಕ್ ಸೌಂಡ್ ಟೆಕ್ನಾಲಜಿ ಬಳಸಿ ಸಿನಿಮಾ ಮೂಡಿಬಂದಿದ್ದು, ಬಹುತೇಕ ಹೊಸಬರೇ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಯುವನ್, ರಿಧಾನ್ ಕೃಷ್ಣ, ಅನುಷಾ ಸುರೇಶ್, ಅಮಿತ್ ಶಿವದಾಸ್ ನಾಯರ್, ಹರೀಶ್ ಪೆರಾಡಿ, ವಿಜಯನ್, ರೆಂಜಿ ಪೆನಿಕರ್ ತಾರಾಗಣದಲ್ಲಿದ್ದಾರೆ.

ಈ ಹಿಂದೆ ಈ ಚಿತ್ರದ ಟೀಸರ್ ಅನ್ನು ಹಲವು ಭಾಷೆಗಳಲ್ಲಿ ಆಯಾ ಭಾಷೆಯ ಸ್ಟಾರ್ ಕಲಾವಿದರು ಟೀಸರ್ ಬಿಡುಗಡೆ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೀಗ ಈ ಬಹುನಿರೀಕ್ಷಿತ ಸಿನಿಮಾ ಡಿ.10ಕ್ಕೆ ಚಿತ್ರ ಬಿಡುಗಡೆ ಆಗುತ್ತಿದೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles