ಶಿವರಾಮ್ ಪುತ್ರ ಲಕ್ಷ್ಮೀಶ್ ಅಂತ್ಯಕ್ರಿಯೆಯ ಕುರಿತು ಮಾಹಿತಿ ನೀಡಿದ್ದಾರೆ. ‘‘ಬೆಳ್ಳಗ್ಗೆ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರವನ್ನು ರವಾನಿಸಲಾಗುವುದು. 7.30- 10 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶವಿರಲಿದೆ. ನಂತರ 11 ಗಂಟೆಗೆ ಬನಶಂಕರಿಯ ಚಿತಗಾರದಲ್ಲಿ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ’’ ಎಂದು ಅವರು ಹೇಳಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ, ಸಕಲರಿಗೂ ಆಪ್ತ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಶಿವರಾಮಣ್ಣ ಎಂದೇ ಜನಪ್ರಿಯರಾಗಿದ್ದ ಶಿವರಾಂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ, ನಿರ್ದೇಶನ ಸಹ ಮಾಡಿದ್ದಾರೆ.
ಶಿವರಾಂ ನಿಧನದಿಂದ ಚಿತ್ರರಂಗಕ್ಕೆ ಮತ್ತೊಂದು ಆಘಾತಕ್ಕೆ ಈಡಾಗಿದೆ. ಶಿವರಾಂ ನಿಧನದ ಬಗ್ಗೆ ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ಶಿವರಾಂ ಅವರೊಟ್ಟಿಗಿನ ತಮ್ಮ ನಂಟಿನ ಬಗ್ಗೆ ಮಾತನಾಡಿದ್ದಾರೆ.
ಹಿರಿಯ ನಟ ಶಿವರಾಂ ಅವರು 83ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ. ಸ್ಯಾಂಡಲ್ವುಡ್ಗೆ ಸಾಕಷ್ಟು ಕೊಡುಗೆ ನೀಡಿದ್ದ ಅವರನ್ನು ಕಳೆದುಕೊಂಡಿರುವುದು ಎಲ್ಲರಿಗೂ ಸಾಕಷ್ಟು ನೋವು ತಂದಿದೆ. ಶಿವರಾಂ ಅವರ ಬಗ್ಗೆ ಸಾಕಷ್ಟು ಹಿರಿಯ ನಟರು, ರಾಜಕಾರಣಿಗಳು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಅವರ ಕುಟುಂಬಕ್ಕೆ ಸಂತಾಪ ಹೇಳುವ ಕೆಲಸವನ್ನೂ ಮಾಡಲಾಗುತ್ತಿದೆ.
ಶಿವರಾಮ್ ಅವರ ಪಾರ್ಥೀವ ಶರೀರವನ್ನು ಅವರ ನಿವಾಸದಲ್ಲಿ ಇರಿಸಲಾಗಿದ್ದು ಹಲವಾರು ಗಣ್ಯರು, ಸ್ನೇಹಿತರು, ಚಿತ್ರ ತಾರೆಯರು ಬಂದು ದರ್ಶನ ಪಡೆದುಕೊಂಡು ಹೋಗಿತ್ತಿದ್ದಾರೆ, ಸಾರ್ವಜನಿಕ ದರ್ಶನಕ್ಕೆ ನಾಳೆ ವ್ಯವಸ್ಥೆ ಮಾಡಲಾಗಿದ್ದು ಅಂತಿಮ ದರ್ಶನ ಪಡೆಯಬಹದಾಗಿದೆ ಎಂದು ಶಿವರಾಮ್ ಪುತ್ರ ಲಕ್ಷ್ಮೀಶ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.

****