ಇಂದು (ಡಿ.4) ಅಗಲಿದ ಹಿರಿಯ ಚೇತನ ಚಂದನವನದ ನಮ್ಮೆಲ್ಲರ ಪ್ರೀತಿಯ ಶಿವರಾಮಣ್ಣ ಇಂದು ಬೆಂಗಳೂರಿನ ಶ್ರೀನಿವಾಸನಗರದ ಪ್ರಶಾಂತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವರಾಂ ನಿಧನಕ್ಕೆ ರಾಜ್ಯದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.ರಾಜ್ಯದ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅಗಲಿದ ಹಿರಿಯ ನಟ ಶಿವರಾಮ್ ಅವರಿಗೆ ಶ್ರದ್ದಾಂಜಲಿ ಅರ್ಪಿಸಿದ್ದಾರೆ. ಟೀಟ್ ಮೂಲಕ ಶ್ರದ್ದಾಂಜಲಿ ಅರ್ಪಿಸಿರುವ ರಾಜ್ಯದ ಸಿಎಂ ಬಸವರಾಜ ಬೊಮ್ಮಾಯಿ
ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ. ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ.ಎಂದು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಶಿವರಾಂ ಅವರ ಪಾರ್ಥಿವ ಶರೀರವನ್ನು ತ್ಯಾಗರಾಜ ನಗರದಲ್ಲಿರುವ ಮನೆಗೆ ರವಾನಿಸಲಾಗುವುದು. ಅಲ್ಲಿ ಕುಟುಂಬದವರು ಸಾಂಪ್ರದಾಯಿಕ ಪೂಜೆ ಸಲ್ಲಿಸಲಿದ್ದು, ನಂತರ ಮನೆಯಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಅಂತ್ಯಕ್ರಿಯೆಯ ಕುರಿತು ಸಚಿವ ಆರ್.ಅಶೋಕ್ ಅವರೊಂದಿಗೆ ಚರ್ಚಿಸಿ ನಂತರ ನಿರ್ಧರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
****