22.9 C
Bengaluru
Sunday, March 26, 2023
spot_img

ಭರ್ಜರಿ ಸದ್ದು ಮಾಡ್ತಿದೆ ‘ಪದವಿ ಪೂರ್ವ’ ಚಿತ್ರ

ಯೋಗರಾಜ್ ಸಿನಿಮಾಸ್ ಹಾಗು ರವಿ ಶಾಮನೂರ್ ಫಿಲಂಸ್‌ರವರು ಜಂಟಿಯಾಗಿ ನಿರ್ಮಿಸಿ ಹರಿಪ್ರಸಾದ್ ಜಯಣ್ಣ ನಿರ್ದೇಶಿಸುತ್ತಿರುವ ‘ಪದವಿಪೂರ್ವ’ ಚಿತ್ರ ನಿರ್ಮಾಣ ಹಂತದಲ್ಲೇ ಭರ್ಜರಿ ಸುದ್ದಿ ಮಾಡುತ್ತಿದೆ.

ಚಿತ್ರಕ್ಕೆ ನಟಿ ದಿವ್ಯ ಉರುಡುಗ ಅಯ್ಕೆ ಅದ ಬೆನ್ನಲ್ಲೇ ಈಗ ಯುವ ನಟ ‘ಪ್ರಭು ಮುಂದ್ಕುರ್’ ಅತಿಥಿ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ‘ಉರ್ವಿ’ ‘ಡಬಲ್ ಇಂಜಿನ್’ ‘ರಿಲ್ಯಾಕ್ಸ್ ಸತ್ಯ’ ಚಿತ್ರಗಳಲ್ಲಿ ನಾಯಕನ ಪಾತ್ರ ನಿರ್ವಹಿಸಿ ‘ಮೈಸೂರ್ ಡೈರೀಸ್’ ‘ರಾಂಚಿ’ ಹಾಗೂ ‘ಮರ್ಫಿ’ ಎಂಬ ಸಾಲು ಸಾಲು ಚಿತ್ರಗಳಲ್ಲಿ ಅವಕಾಶ ಗಿಟ್ಟಿಸಿರುವ ಈ ಪ್ರತಿಭಾನ್ವಿತ ನಟ ಈಗ ಪದವಿಪೂರ್ವ ಚಿತ್ರದ ಮೂಲಕ ಭಟ್ಟರ ಶಿಷ್ಯವೃಂದದ ಜೊತೆ ಸೇರಿದ್ದಾರೆ.

ಚಿತ್ರದ ಐದನೇ ಹಂತದ ಚಿತ್ರೀಕರಣ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರಾರಂಭವಾಗಿ ಎರಡು ದಿನಗಳ ಕಾಲ ಚಿತ್ರೀಕರಣ ನಡೆಸಿದ್ದು, ಅದರ ಮುಂದುವರಿದ ಭಾಗವಾಗಿ ಇದೇ ತಿಂಗಳ 13ಕ್ಕೆ ಮಂಗಳೂರಿನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಸಕಲ ಸಿದ್ಧತೆ ನಡೆಸಿದೆ ಎಂದು ಚಿತ್ರದ ನಿರ್ದೇಶಕ ಹರಿಪ್ರಸಾದ್ ಜಯಣ್ಣ ತಿಳಿಸಿದ್ದಾರೆ.

ಹೊಸಬರ ದಂಡೇ ಇರುವ ಈ ಚಿತ್ರಕ್ಕೆ ಯುವ ಪ್ರತಿಭೆ ಪೃಥ್ವಿ ಶಾಮನೂರು ನಾಯಕನಾದರೆ, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಪದವಿಪೂರ್ವ ಚಿತ್ರಕ್ಕಾಗಿ ಅರ್ಜುನ್ ಜನ್ಯ ಸಂಯೋಜಿಸಿರುವ ರಾಗಗಳಿಗೆ ಕನ್ನಡ ಶೋತೃಗಳ ನಿಕಟಕವಿ ಯೋಗರಾಜ್ ಭಟ್ ಸಾಹಿತ್ಯ ರಚಿಸಿದರೆ, ಖ್ಯಾತ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಕಣ್ಚಳಕ ಹಾಗು ಮಧು ತುಂಬಕೆರೆಯ ಸಂಕಲನದ ಕೈಚಳಕ ಚಿತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles