ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ‘ಆರ್ ಆರ್ ಆರ್’ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್ ಉದ್ದಕ್ಕೂ ದೃಶ್ಯ ವೈಭವ ಇದೆ. ಟ್ರೇಲರ್ನಲ್ಲಿ ರಾಮ್ ಚರಣ್ ಹಾಗೂ ಜ್ಯೂ.ಎನ್ ಟಿ ಆರ್ ಮಿಂಚಿದ್ದಾರೆ. ರಾಜಮೌಳಿ ಅವರ ಕಸುಬುದಾರಿಕೆ ಟ್ರೇಲರ್ನಲ್ಲಿ ಸ್ಪಷ್ಟವಾಗಿದೆ. ಈ ಟ್ರೇಲರ್ ನೋಡಿದ ನಂತರದಲ್ಲಿ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆ ದುಪ್ಪಟ್ಟಾಗಿದೆ. ಟ್ರೇಲರ್ ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರಬಾರಿ ವೀಕ್ಷಣೆ ಕಂಡಿದೆ. ‘ಜನವರಿ 7ರಂದು ‘ಆರ್ ಆರ್ ಆರ್’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವಿದೆ. ಈ ಕಾರಣಕ್ಕೆ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಹಲವು ಹಾಡುಗಳನ್ನು ರಿಲೀಸ್ ಮಾಡುವ ಮೂಲಕ ಚಿತ್ರದ ಮೇಲೆ ಭರವಸೆ ಹುಟ್ಟಿಸುವ ಕೆಲಸ ನಡೆದಿದೆ. ಈಗ ಸಿನಿಮಾದ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಪ್ರಿಯರ ಕೌತುಕ ಹೆಚ್ಚಿದೆ.
ಟ್ರೇಲರ್ನಲ್ಲಿ ಎಲ್ಲಾ ಪಾತ್ರಗಳ ಪರಿಯವಾಗಿದೆ. ಸಿನಿಮಾ ಎಷ್ಟು ಅದ್ದೂರಿಯಾಗಿ ಇರಲಿದೆ ಎನ್ನುವುದರ ಸಣ್ಣ ಝಲಕ್ ಟ್ರೇಲರ್ನಲ್ಲಿ ಸಿಕ್ಕಿದೆ. ‘ಆರ್ಆರ್ಆರ್’ ಸಿನಿಮಾ ಮೇಕಿಂಗ್ ಕೂಡ ಉತ್ಕೃಷ್ಟ ಮಟ್ಟದಿಂದ ಕೂಡಿರಲಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಚಿತ್ರತಂಡ ಪ್ರಚಾರಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಲಿದೆ. ಟ್ರೇಲರ್ ರಿಲೀಸ್ ಆದ ಒಂದು ತಿಂಗಳವರೆಗೆ ನಾನಾ ರಾಜ್ಯಗಳಿಗೆ ತೆರಳಿ ತಂಡ ಸಿನಿಮಾ ಪ್ರಚಾರ ಕಾರ್ಯ ನಡೆಸಿಲಿದೆ.
ಕರ್ನಾಟಕದಲ್ಲಿ ಗ್ರ್ಯಾಂಡ್ ಆಗಿ ಪ್ರೀ-ರಿಲೀಸ್ ಇವೆಂಟ್ ನಡೆಸಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ರಾಜಮೌಳಿ ಇತ್ತೀಚೆಗೆ ಮಾಹಿತಿ ನೀಡಿದ್ದರು. ಈ ಕಾರ್ಯ ಯಾವಾಗ ನಡೆಯಲಿದೆ ಎನ್ನುವ ಕುತೂಹಲ ಕನ್ನಡಿಗರಲ್ಲಿ ಮೂಡಿದೆ. ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂನಲ್ಲಿ ಸಿನಿಮಾ ಮೂಡಿ ಬರುತ್ತಿದೆ.
‘ಆರ್ ಆರ್ ಆರ್’ ಸಿನಿಮಾ ಜನವರಿ 7 ರಂದು ತೆರೆಗೆ ಬರುತ್ತಿದೆ. ಇದು ರಾಜಮೌಳಿ ಕಡೆಯಿಂದ ಅಭಿಮಾನಿಗಳಿಗೆ ಸಂಕ್ರಾಂತಿಗೆ ಸಿಗುತ್ತಿರುವ ಅತಿ ದೊಡ್ಡ ಗಿಫ್ಟ್. ಹಬ್ಬದ ಸಂದರ್ಭವಾದ್ದರಿಂದ ಚಿತ್ರ ಒಳ್ಳೆಯ ಗಳಿಕೆ ಮಾಡುವ ನಿರೀಕ್ಷೆ ಇದೆ. ಇನ್ನು, ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಪೋಸ್ಟರ್, ಟೀಸರ್ ಹಾಗೂ ಹಾಡುಗಳು ಚಿತ್ರದ ನಿರೀಕ್ಷೆಯನ್ನು ಈಗಾಗಲೇ ಹೆಚ್ಚಿಸಿದೆ. ಡಿಸೆಂಬರ್ 9ರಂದು ರಿಲೀಸ್ ಆಗುವ ಟ್ರೇಲರ್ ಮೇಲೆಯೂ ಹೆಚ್ಚು ಕುತೂಹಲ ಇಟ್ಟುಕೊಳ್ಳಲಾಗಿದೆ. ಈ ಎಲ್ಲಾ ಕಾರಣಗಳಿಂದ ಸಿನಿಮಾ ಒಳ್ಳೆಯ ಬಿಸ್ನೆಸ್ ಮಾಡಿದೆ. ರಿಲೀಸ್ಗೂ ಮೊದಲೇ ಈ ಚಿತ್ರ ಬರೋಬ್ಬರಿ 890 ಕೋಟಿ ರೂಪಾಯಿ ಬಾಚಿಕೊಂಡಿದೆ ಎನ್ನಲಾಗುತ್ತಿದೆ.
****