‘ಬಾಹುಬಲಿ’ ಯಶಸ್ಸಿನ ಬಳಿಕ ರಾಜಮೌಳಿ ನಿರ್ದೇಶಿಸಿರುವ RRR ಸಿನಿಮಾ ಭಾರಿ ನಿರೀಕ್ಷೆ ಹುಟ್ಟಿಸಿದೆ. ಜನವರಿ 7 ರಂದು ಬಹುನಿರೀಕ್ಷಿತ RRR ಸಿನಿಮಾ ರಿಲೀಸ್ ಆಗಲಿದೆ. ಎಲ್ಲಾ ಭಾಷೆಯಲ್ಲೂ ತೆರೆ ಕಾಣುತ್ತಿರುವ ಈ ಚಿತ್ರ, ಕನ್ನಡದಲ್ಲೂ ಡಬ್ಬ್ ಆಗಿದ್ದು ಜನವರಿ 7 ಕರ್ನಾಟಕದ ಚಿತ್ರಮಂದಿರಗಳಲ್ಲೂ ರಿಲೀಸ್ ಆಗುತ್ತಿದೆ. ಈ ಬಗ್ಗೆ ನಿರ್ದೇಶಕ ಎಸ್.ಎಸ್ ರಾಜಮೌಳಿ, ನಟ ರಾಮಚರಣ್, ಜೂ. ಎನ್ಟಿಆರ್ ,ನಟಿ ಆಲಿಯಾ ಭಟ್ ಸೇರಿದಂತೆ ಇಡೀ ಚಿತ್ರತಂಡ ಇವತ್ತು (ಡಿ.10) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಕನ್ನಡದಲ್ಲಿ ತೆರೆ ಕಾಣುತ್ತಿರುವ RRR ಸಿನಿಮಾ ಬಗ್ಗೆ ಒಂದಿಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.
ಈ ವೇಳೆ ಜೂ. ಎನ್ ಟಿ ಆರ್ ಕನ್ನಡದಲ್ಲೇ ಮಾತನಾಡಿ ಕನ್ನಡಿಗರಿಗೆ ಧನ್ಯವಾದ ತಿಳಿಸಿದ್ದಾರೆ. ಕನ್ನಡದಲ್ಲಿ ಜೂ.ಎನ್ಟಿಆರ್ ಇಂದು ಕನ್ನಡಿಗರೊಂದಿಗೆ ಕನ್ನಡದ ನೆಲದಲ್ಲಿ ಕುಳಿತಿರುವುದಕ್ಕೆ ಸಂತಸವಾಗುತ್ತಿದೆ. ಪ್ರೋತ್ಸಾಹ ನೀಡುತ್ತಿರುವ ಎಲ್ಲರಗೂ ಧನ್ಯವಾದಗಳು ಎಂದು ಮಾತನಾಡಿದ್ದಾರೆ.
RRR ಚಿತ್ರವು ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಸಿನಿಮಾ. ಬಹುಕೋಟಿ ವೆಚ್ಚದಲ್ಲಿ ರೆಡಿಯಾದ ಸಿನಿಮಾ 2022ರ ಜನವರಿ 7 ಪಂಚ ಭಾಷೆಗಳಲ್ಲಿ ತೆರೆಕಾಣುತ್ತಿದೆ. ಚಿತ್ರದಲ್ಲಿ ಆಲಿಯಾ ಭಟ್, ಅಜಯ್ ದೇವಗನ್ ರಾಮ್ಚರಣ್ ಸೇರಿದಂತೆ ಹಲವು ತಾರೆಯರು ಕಾಣಿಸಿಕೊಂಡಿದ್ದಾರೆ. ನಿನ್ನೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಎಲ್ಲಡೆ ಸಖತ್ ರೆಸ್ಪಾನ್ಸ್ ದೊರಕಿದೆ. ಇದರ ಬೆನ್ನಲ್ಲೇ ಚಿತ್ರತಂಡವು ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದೆ. ರಾಜಮೌಳಿ ನಿರ್ದೇಶನದಲ್ಲಿ ತಯಾರಾದ ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದು, ಟ್ರೇಲರ್ ನೋಡಿದ ಬಳಿಕ ಚಿತ್ರದ ಬಗ್ಗೆ ನಿರೀಕ್ಷೆ ಇನ್ನಷ್ಟು ಜಾಸ್ತಿಯಗಿದೆ.
****