21.8 C
Bengaluru
Wednesday, November 30, 2022
spot_img

ಫುಲ್ ಹೈಪ್ ಕ್ರಿಯೇಟ್ ಮಾಡಿದ ಕಾಮನ್ ಮ್ಯಾನ್ ಬಡವ ರಾಸ್ಕಲ್ ಟ್ರೇಲರ್!

ಡಾಲಿ ಧನಂಜಯ​ ಅವರು ನಟನೆಯಬಡವ ರಾಸ್ಕಲ್ ಚಿತ್ರ ರಾಜ್ಯದಲ್ಲಿ ಈಗಾಗಲೆ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು ಇಂದು (ಡಿ.13) ಟ್ರೈಲರ್ ಲಾಂಚ್ ಮಾಡಲಾಗಿದೆ. ಧನಂಜಯ್ ನಟನೆಗಷ್ಟೆ ಸೀಮಿತವಾಗದೆ ಜೊತೆ  ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ‘ಬಡವ ರಾಸ್ಕಲ್​’ ಸಿನಿಮಾ ನಿರ್ಮಾಣಮಾಡಿದ್ದಾರೆ. ಈ ಚಿತ್ರ ಕ್ರಿಸ್​ಮಸ್​ ಪ್ರಯುಕ್ತ ಡಿಸೆಂಬರ್​ 24ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ ನಡೆದಿದೆ.

ಧನಂಜಯ ಈ ಸಿನಿಮಾದಲ್ಲಿ ಆಟೋ ಓಡಿಸೋ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಕಥಾ ನಾಯಕ ಗೆಳೆಯರಿಗಾಗಿ ಏನು ಮಾಡೋಕೂ ರೆಡಿ ಇರುತ್ತಾನೆ. ಇದು ಆತನನ್ನು ಪ್ರೀತಿಸುವ ಹುಡುಗಿಗೆ ಇಷ್ಟವಿಲ್ಲ. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ಆಗುತ್ತದೆ. ಇನ್ನು, ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್​ ದೃಶ್ಯಗಳು ಇರಲಿವೆ ಎಂಬುದು ಟ್ರೇಲರ್​​​ನಲ್ಲಿ ಹೈಲೈಟ್​ ಆಗಿದೆ. ರಿಲೀಸ್​ ಆದ ಕೆಲವೇ ನಿಮಿಷಗಳಲ್ಲಿ 20 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಟ್ರೇಲರ್ ಪಡೆದುಕೊಂಡಿದೆ. ಇನ್ನು, ನಾಯಕಿಯಾಗಿ ಅಮೃತಾ ಅಯ್ಯಂಗಾರ್​ ಮಿಂಚಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles