ಚಾರ್ಲಿ 777 ಸಿನಿಮಾ ಡಿ.31ಕ್ಕೆ ನಿಮ್ಮ ಮುಂದೆ ಬರಲಿದ್ದಾರೆ ಅಂತ ಈ ಹಿಂದೆ ಅಭಿಮಾನಿಗಳಿಗೆ ಚಿತ್ರ ತಂಡ ಮಾಹಿತಿ ನೀಡಿತ್ತು. ಆದ್ರೆ ಈಗ ಬಂದಿರೋ ಹೊಸ ಅಪ್ ಡೇಟ್ ಪ್ರಕಾರ ಚಾರ್ಲಿ 777 ಚಿತ್ರ ತಂಡ ಸಿನಿಮಾ ಬಿಡುಗಡೆ ದಿನಾಂಕವನ್ನ ಮುಂದೂಡಿದೆ.
ಸ್ಯಾಂಡಲ್ ವುಡ್ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ವಿಭಿನ್ನ ಕಥಾಹಂದರವುಳ್ಳ ಸಿನಿಮಾ ಚಾರ್ಲಿ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾತರದಿಂದ ಕಾಯ್ತಾ ಇದ್ರು.. ಹೀಗಾಗಿ ಚಿತ್ರ ತಂಡ ಸಹ ಚಾರ್ಲಿ 777 ಸಿನಿಮಾವನ್ನ ಇದೇ ಡಿಸೆಂಬರ್(December) 31 ರಂದು ಬಿಡುಗಡೆ ಮಾಡಿ ಅಭಿಮಾನಿಗಳಿಗೆ ಹೊಸ ವರ್ಷದ ಸಿಹಿ ನೀಡೋದಕ್ಕೆ ಮುಂದಾಗಿತ್ತು.. ಆದ್ರೆ ಇದ್ದಕ್ಕಿದ್ದಂತೆ ಸಿನಿಮಾ ತಂಡ ಚಾರ್ಲಿ 777 ಸಿನಿಮಾ ಬಗ್ಗೆ ಹೊಸ ಅನೌನ್ಸ್ ಮಾಡಿ ಅಭಿಮಾನಿಗಳಿಗೆ ಶಾಕ್ ನೀಡಿದೆ.
ಇನ್ನೂ ಸಿನಿಮಾ ರಿಲೀಸ್ ಡೇಟ್ ಮುಂದೆ ಹೋಗಿರೋ ಬಗ್ಗೆ ಸ್ವತಃ ರಕ್ಷಿತ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗೂ ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ. ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ’ ಎಂದು ಸೋಷಿಯಲ್ ಮೀಡಿಯಾ ಮೂಲಕ ರಕ್ಷಿತ್ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ.
****