ಸ್ಯಾಂಡಲ್ ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಎಂ ಎಲ್ ಸಿ ಚುನಾವಣೆ, ಒಕ್ಕಲಿಗರ ಸಂಘದ ಚುನಾವಣೆಗಳಲ್ಲಿ ಬ್ಯುಸಿ ಇದ್ರು, ಸದ್ಯ ಚುನಾವಣೆಗಳನೆಲ್ಲಾ ಮುಗಿಸಿರುವ ನಿಖಿಲ್ ಕೊಂಚ ರಿಲ್ಯಾಕ್ಸ್ ಮೂಡ್ನಲ್ಲಿ ಇರುವಹಾಗಿದೆ. ಯಾಕಂದ್ರೆ ನಿಖಿಲ್ ಕುಮಾರ್ ಸ್ವಾಮಿಯವರು ತಮ್ಮ ಪ್ರೀತಿಯ ಪತ್ನಿ ರೇವತಿ ಜೊತೆಗೆ ರೋಮ್ಯಾಂಟಿಕ್ ಆಗಿ ನೃತ್ಯ ಮಾಡಿರುವ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
ಜಾಗ್ವಾರ್ ಸಿನಿಮಾದ ಮೂಲಕ ಚಂದನವನಕ್ಕೆ ಕಾಲಿಟ್ಟ ನಿಖಿಲ್ ಸದ್ಯ ಕನ್ನಡದಲ್ಲಿ ಬಹುಬೇಡಿಕೆಯ ನಟರಾಗಿದ್ದಾರೆ. ತಮ್ಮ ಅಭಿನಯ, ಡ್ಯಾನ್ಸ್, ಸ್ಟೈಲ್ ಮೂಲಕ ಮೊದಲ ಸಿನಿಮಾದಲ್ಲಿಯೇ ಅಭಿಮಾನಿಗಳ ಮನ ಕದ್ದಿದ್ದ ನಿಖಿಲ್ ರಾಜಕೀಯದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಸಿನಿಮಾ ಹಾಗೂ ರಾಜಕೀಯ ಎರಡು ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದರೂ ನಿಖಿಲ್ ಈ ಮಧ್ಯೆ ಪತ್ನಿಗೂ ಸಹ ಅಷ್ಟೇ ಟೈಮ್ ನೀಡುತ್ತಾರೆ. ಆಗಾಗ ಪತ್ನಿ ಜೊತೆಗೆ ಕಾಲ ಕಳೆಯುತ್ತಿರುವ ಫೋಟೋ ಹಾಗೂ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ನಿಖಿಲ್ ಇದೀಗ ಪತ್ನಿ ಜೊತೆಗೆ ತಾವು ಅಭಿನಯಿಸಿರುವ ಬಹುನಿರೀಕ್ಷಿತ ರೈಡರ್ ಸಿನಿಮಾದ ಮೆಲೋಡಿ ಹಾಡೊಂದಕ್ಕೆ ಸೂಪರ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಇನ್ನೂ ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಚಿಕೊಂಡಿದ್ದಾರೆ.
ವೀಡಿಯೋದಲ್ಲಿ ನಿಖಿಲ್ ಹಾಗೂ ರೇವತಿ ಬ್ಲ್ಯಾಕ್ ಆ್ಯಂಡ್ ಬ್ಲ್ಯಾಕ್ ಸ್ಟೈಲಿಶ್ ಡ್ರೆಸ್ ತೊಟ್ಟು ರೈಡರ್ ಸಿನಿಮಾದ ನಿನ್ನಲ್ಲೇ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಸದ್ಯ ಈ ವೀಡಿಯೋ ನೋಡಿ ನಿಖಿಲ್ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.
ಕೆಲವು ತಿಂಗಳ ಹಿಂದೆಯಷ್ಟೇ ನಿಖಿಲ್ ಹಾಗೂ ರೇವತಿಗೆ ಗಂಡು ಮಗು ಜನಿಸಿದ್ದು, ಮಗನ ಫೋಟೋವನ್ನು ಅಭಿಮಾನಿಗಳೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ನಿಖಿಲ್ ಸಂತಸ ವ್ಯಕ್ತಪಡಿಸಿದ್ದರು.
ಜಾಗ್ವರ್ ಹಾಗೂ ಸೀತಾರಾಮ ಕಲ್ಯಾಣ ಸಿನಿಮಾದ ನಂತರ ನಿಖಿಲ್ ರೈಡರ್ ಸಿನಿಮಾಕ್ಕೆ ಬಣ್ಣಹಚ್ಚಿದ್ದು, ಈಗಾಗಲೇ ಈ ಸಿನಿಮಾದ ಹಾಡುಗಳು ಭಾರೀ ಸದ್ದು ಮಾಡುತ್ತಿದೆ. ಇದೇ ಡಿಸೆಂಬರ್ 24ರಂದು ರೈಡರ್ ಸಿನಿಮಾ ಬಿಡುಗಡೆಯಾಗುತ್ತಿದ್ದು, ಬಿಗ್ ಸ್ಕ್ರೀನ್ ಮೇಲೆ ನಿಖಿಲ್ ರನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
****