ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಗೆ ಇಂದು (ಡಿಸೆಂಬರ್ 17) 39 ನೇ ಹುಟ್ಟು ಹಬ್ಬ್ದ ಸಂಭ್ರಮ. ಆದರೆ ಆ ಸಂತಸವನ್ನು ಸಂಭ್ರಮಿಸುವ ಸ್ಥಿತಿಯಲ್ಲಿ ಶ್ರೀಮುರಳಿ ಇಲ್ಲಾ ಕಾರಣ ಪುನೀತ್ ರಾಜಕುಮಾರ್ ನಿಧನ. ಪುನೀತ್ ರಾಜ್ಕುಮಾರ್ ನಿಧನ ಹೊಂದದೇ ಇದ್ದಿದ್ದರೆ ಶ್ರೀಮುರಳಿ ಅದ್ದೂರಿಯಾಗಿ ಬರ್ತ್ಡೇ ಆಚರಣೆ ಮಾಡಿಕೊಳ್ಳುತ್ತಿದ್ದರು. ಅವರ ಸಾವಿನ ಹಿನ್ನೆಲೆಯಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದಿಲ್ಲ ಎಂದು ಶ್ರೀಮುರಳಿ ಹೇಳಿದ್ದಾರೆ. ಆ ಕಾರಣದಿಂದ ಈ ಬಾರಿ ಅವರ ಅಭಿಮಾನಿಗಳು ಜನ್ಮದಿನವನ್ನು ಅದ್ದೂರಿಯಾಗಿ ಸಂಭ್ರಮಿಸುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಹರಿದುಬರುತ್ತಿವೆ. ಸೆಲೆಬ್ರಿಟಿಗಳು, ಅಭಿಮಾನಿಗಳು ಶ್ರೀಮುರಳಿಗೆ ವಿಶ್ ಮಾಡಿ ಶುಭ ಹಾರೈಸುತ್ತಿದ್ದಾರೆ.

ಶ್ರೀಮುರಳಿ ಬರ್ತ್ಡೇ ದಿನ ಅವರ ಅಭಿಮಾನಿಗಳು ಮನೆಯ ಮುಂದೆ ಜಮಾಯಿಸುತ್ತಿದ್ದರು. ಕೇಕ್ ಕತ್ತರಿಸಿ ಸಂಭ್ರಮಿಸುತ್ತಿದ್ದರು. ಅವರು ಕೂಡ ಅಭಿಮಾನಿಗಳ ಜತೆಗೂಡಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗುತ್ತಿದ್ದರು. ಆದರೆ, ಪುನೀತ್ ಸಾವಿನಿಂದ ಇಡೀ ಕರ್ನಾಟಕಕ್ಕೆ ಸೂತಕದ ಛಾಯೆ ಆವರಿಸಿದೆ. ಹೀಗಾಗಿ, ಶ್ರೀಮುರಳಿ ಬರ್ತ್ಡೇ ಆಚರಣೆ ಮಾಡಿಕೊಳ್ಳುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಜನರು ಶ್ರೀಮುರಳಿಗೆ ವಿಶ್ ಮಾಡುತ್ತಿದ್ದಾರೆ. ಅವರ ಫೋಟೋಗಳನ್ನು ಹಂಚಿಕೊಂಡು ಪ್ರೀತಿಯಿಂದ ಜನ್ಮದಿನದ ಶುಭಾಶಯ ತಿಳಿಸುತ್ತಿದ್ದಾರೆ.