17.8 C
Bengaluru
Saturday, December 10, 2022
spot_img

ಭಜರಂಗಿ 2 ಅಪ್ಪು ಗೆ ಅರ್ಪಣೆ ಎಂದ ಶಿವಣ್ಣ!

ನಟ ಶಿವರಾಜ್​ಕುಮಾರ್​ ಮತ್ತು ನಿರ್ದೇಶಕ ಹರ್ಷ ಕಾಂಬಿನೇಷನ್​ನಲ್ಲಿ ಮೂಡಿ ಬಂದ ‘ಭಜರಂಗಿ 2’ ಸಿನಿಮಾ ಜನ ಮೆಚ್ಚುಗೆ ಪಡೆದುಕೊಂಡಿತ್ತು. ಫ್ಯಾಮಿಲಿ ಆಡಿಯನ್ಸ್​ಗೆ ಈ ಸಿನಿಮಾ ಇಷ್ಟವಾಗಿತ್ತು. ಈಗ ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್​ ಆಗುತ್ತಿದೆ. ಈ ಚಿತ್ರವನ್ನು ಶಿವರಾಜ್​ಕುಮಾರ್​ ಅವರು ಪುನೀತ್​ಗೆ ಅರ್ಪಿಸಿದ್ದಾರೆ. ಈ ಬಗ್ಗೆ ವಿಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ.

ಪುನೀತ್ ರಾಜಕುಮಾರ್  ಶಿವಣ್ಣನ ಭಜರಂಗಿ 2 ಚಿತ್ರಕ್ಕೆ ವಿಶ್ ಮಾಡುತ್ತಿರುವುದು

ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಶಿವರಾಜ್​ಕುಮಾರ್​, ‘ನನ್ನ ನಟನೆಯ ‘ಭಜರಂಗಿ 2’ ಸಿನಿಮಾ ಜೀ 5 ನಲ್ಲಿ ರಿಲೀಸ್​ ಆಗುತ್ತಿದೆ. ನಾನು ಹಾಗೂ ನನ್ನ ತಂಡ ಈ ಸಿನಿಮಾವನ್ನು ಅಪ್ಪುಗೆ ಡೆಡಿಕೇಟ್​ ಮಾಡುತ್ತೇವೆ. ಇದು ಅಪ್ಪು ಎಡಿಟಿಂಗ್​ ರೂಮ್​​ನಲ್ಲೇ ಎಡಿಟ್​ ಮಾಡಿದ ಚಿತ್ರ. ಸಾಕಷ್ಟು ಬಾರಿ ಅವನು ಸಿನಿಮಾದ ದೃಶ್ಯ ನೋಡಿ ಮೆಚ್ಚುಗೆಯ ಮಾತನಾಡಿದ್ದ. ಪ್ರೀ ರಿಲೀಸಿಂಗ್​ ಇವೆಂಟ್​ಗೂ ಅಪ್ಪು ಬಂದು ಬೆಂಬಲಿಸಿದ್ದರು. ಡ್ಯಾನ್ಸ್​ ಮಾಡಿದ್ದರು. ರಿಲೀಸ್​ ಆದ ದಿನವೂ ಬೆಳಗ್ಗೆ ಟ್ವೀಟ್​ ಮಾಡಿ ಶುಭಕೋರಿದ್ದರು. ಸಿನಿಮಾದ ಸಾಕಷ್ಟು ದೃಶ್ಯಗಳು ಅಪ್ಪು ಅವರನ್ನು ನೆನಪಿಸುತ್ತವೆ’ ಎಂದು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ.

ಅ.29ರಂದು ಅದ್ದೂರಿಯಾಗಿ ‘ಭಜರಂಗಿ 2’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆ ಆಗಿತ್ತು. ಮುಂಜಾನೆ ಅನೇಕ ಕಡೆಗಳಲ್ಲಿ ಶೋ ಆರಂಭವಾಗಿತ್ತು. ಎಲ್ಲೆಡೆ ಹೌಸ್​ ಫುಲ್​ ಪ್ರದರ್ಶನವಾಗಿ, ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್​ ಸಿಗುತ್ತಿರುವುದು ನೋಡಿ ಇಡೀ ತಂಡಕ್ಕೆ ಖುಷಿ ಆಗಿತ್ತು. ಕೆಲವು ಚಿತ್ರಮಂದಿರಗಳಿಗೆ ಶಿವಣ್ಣ ಭೇಟಿ ನೀಡಿದ್ದರು. ಅದಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ಕನ್ನಡ ಚಿತ್ರರಂಗದ ಪಾಲಿಗೆ ಕಹಿ ಸುದ್ದಿಯೊಂದು ಸಿಡಿಲಿನಂತೆ ಬಂದೆರಗಿತ್ತು. ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ಎಲ್ಲವೂ ಸ್ತಬ್ದವಾದಂತಾಗಿತ್ತು. ಆ ಘಟನೆ ಬಳಿಕ ಚಿತ್ರಮಂದಿರದ ಕಡೆಗೆ ಬರಲು ಬಹುತೇಕರು ಹಿಂದೇಟು ಹಾಕಿದ್ದರು.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles