23.8 C
Bengaluru
Thursday, December 8, 2022
spot_img

ಗಜಾನನ ಆಂಡ್ ಗ್ಯಾಂಗ್ ಟ್ರೇಲರ್ ರಿಲೀಸ್..! Trailer release live

ಶ್ರೀ ಮಹದೇವ್ ಅದಿತಿ ಪ್ರಭುದೇವ ಅಭಿನಯದ ‘ಗಜಾನನ ಅಂಡ್ ಗ್ಯಾಂಗ್’ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಟ್ರೇಲರ್ ಅನ್ನು ಮೇಘನಾ ರಾಜ್ ಬಿಡುಗಡೆ ಮಾಡಿದ್ದಾರೆ.ಟ್ರೇಲರ್ ಚೆನ್ನಾಗಿ ಮೂಡಿಬಂದಿದ್ದು ಗಜಾನನ ಗ್ಯಾಂಗ್ ಚಿತ್ರದ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ.

‘ನಮ್ ಗಣಿ ಬಿಕಾಂ ಪಾಸ್’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ಮತ್ತು ನಿರ್ದೇಶಕನಾಗಿ ಪಾದರ್ಪಣೆ ಮಾಡಿದ್ದ ನಟ ಅಭಿಷೇಕ್ ಶೆಟ್ಟಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳು ಮುಗಿದಿದ್ದು, ತೆರೆ ಮೇಲೆ ಬರಲು ಸಜ್ಜಾಗಿದೆ. ಈ ಮಧ್ಯೆ ಚಿತ್ರತಂಡ ಚಿತ್ರದ ಟ್ರೇಲರ್ ಇಂದು (ಡಿ.22) ಬಿಡುಗಡೆ ಮಾಡಿದೆ.

ಹೌದು! ‘ಗಜಾನನ ಅಂಡ್ ಗ್ಯಾಂಗ್’ ಚಿತ್ರದಲ್ಲಿ  ‘ಇರುವುದೆಲ್ಲ ಬಿಟ್ಟು’ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆಯ ನಾಯಕನಾಗಿ ಗುರುತಿಸಿಕೊಂಡ ಶ್ರೀ ಮಹದೇವ್ ನಾಯಕನಾಗಿ ನಟಿಸುತ್ತಿದ್ದು, ಅವರಿಗೆ ಜೋಡಿಯಾಗಿ ಅದಿತಿ ಪ್ರಭುದೇವ ಕಾಣಿಸಿಕೊಳ್ಳುತ್ತಿರುವ ಈ ಚಿತ್ರದ ಟ್ರೇಲರ್ ಇಂದು (ಡಿಸೆಂಬರ್ 22ರಂದು) ಬಿಡುಗಡೆಯಾಗಿದೆ.

ಪಕ್ಕಾ ಹಾಸ್ಯ ಪ್ರಧಾನ ಮತ್ತು ಯುವಪೀಳಿಗೆ ಸುತ್ತ ಗಿರಕಿ ಹೊಡೆಯುವ ಕಥೆ ‘ಗಜಾನನ ಅಂಡ್ ಗ್ಯಾಂಗ್’ ಚಿತ್ರದಲ್ಲಿದ್ದು, ಚಿತ್ರದ ನಿರ್ದೇಶಕ ಅಭಿಷೇಕ್ ಚಿತ್ರದ ಪ್ರಮುಖ ಘಟ್ಟದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಹಾಡುಗಳಿಗೆ ಪ್ರದ್ಯುತನ್ ಸಂಗೀತ ಸಂಯೋಜಿಸುತ್ತಿದ್ದು, ಉದಯ ಲೀಲ ಕ್ಯಾಮರಾ ಕೈಚಳಕ, ವಿಜೆಟ್ ಚಂದ್ರ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನವಿದೆ. ಬೃಂದಾವನ್ ಎಂಟರ್ ಪ್ರೈಸಸ್ ಅಡಿಯಲ್ಲಿ ಯುಎಸ್ ನಾಗೇಶ್ ಕುಮಾರ್ ನಿರ್ಮಾಪಕರಾಗಿ ‘ಗಜಾನನ ಅಂಡ್ ಗ್ಯಾಂಗ್’ ಚಿತ್ರಕ್ಕೆ ಹಣ ಹೂಡುತ್ತಿದ್ದಾರೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles