22.9 C
Bengaluru
Sunday, March 26, 2023
spot_img

ಮಲಯಾಳಂ ಹಿರಿಯ ನಿರ್ದೇಶಕ ಕೆ.ಎಸ್.ಸೇತುಮಾಧವನ್ ನಿಧನ!

10 ರಾಷ್ಟ್ರ ಪ್ರಶಸ್ತಿಗಳು ಮತ್ತು 9 ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡ ಮಲಯಾಳಂ ಚಿತ್ರರಂಗದ ಹಿರಿಯ ನಿರ್ದೇಶಕ ಕೆ.ಎಸ್.ಸೇತುಮಾಧವನ್ (90) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಇವರು ತಮಿಳುನಾಡಿನ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಅಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಸೇತುಮಾಧವನ್​ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದು, ಚಿತ್ರರಂಗ ಕಂಬನಿ ಮಿಡಿದಿದೆ.

ಸೇತುಮಾಧವನ್ ಅವರು ಮಲಯಾಳಂ ಮಾತ್ರವಲ್ಲದೇ, ಹಿಂದಿ, ತಮಿಳು ಹಾಗೂ ತೆಲುಗು ಸಿನಿಮಾ ಸೇರಿ ಒಟ್ಟು 70 ಚಿತ್ರಗಳಿಗೆ ಆ್ಯಕ್ಷನ್-ಕಟ್​ ಹೇಳಿದ್ದಾರೆ. 1960ರಲ್ಲಿ ತೆರೆಕಂಡ ‘ಜ್ಞಾನ ಸುಂದರಿ’ ಇವರ ಚೊಚ್ಚಲ ಸಿನಿಮಾವಾಗಿದೆ. 1991ರಲ್ಲಿ ಬಿಡುಗಡೆಯಾದ ‘ವೇನಲ್‌ಕಿನಾವುಗಳ್‌’ ಇವರ ನಿರ್ದೇಶನದಲ್ಲಿ ಮೂಡಿ ಬಂದ ಕೊನೆಯ ಚಿತ್ರವಾಗಿದೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles