23.8 C
Bengaluru
Thursday, December 8, 2022
spot_img

‘ರೈಡರ್’ ಅನ್ನು ಪ್ರೀತಿಯಿಂದ ಸ್ವಾಗತಿಸಿದ ಅಭಿಮಾನಿಗಳು

ನಿಖಿಲ್​ ಕುಮಾರಸ್ವಾಮಿ ಅಭಿನಯದ ‘ರೈಡರ್​’ ಸಿನಿಮಾ ಗ್ರ್ಯಾಂಡ್​ ಆಗಿ ಬಿಡುಗಡೆ ಆಗಿದೆ. ಟ್ರೇಲರ್​ ಮತ್ತು ಹಾಡುಗಳ ಮೂಲಕ ಭಾರಿ ನಿರೀಕ್ಷೆ ಮೂಡಿಸಿದ್ದ ಈ ಚಿತ್ರವನ್ನು ಮೊದಲ ದಿನವೇ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಅನೇಕ ಚಿತ್ರಮಂದಿರಗಳ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ. ನಿಖಿಲ್​ ಕುಮಾರಸ್ವಾಮಿ ಅಭಿಮಾನಿಗಳು ಕುಣಿದು ಸಂಭ್ರಮಿಸುತ್ತಿದ್ದಾರೆ.

ಈ ಚಿತ್ರದಲ್ಲಿ ನಿಖಿಲ್​ಗೆ ಜೋಡಿಯಾಗಿ ಕಾಶ್ಮೀರಾ ಪರದೇಸಿ ನಟಿಸಿದ್ದಾರೆ. ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಹಿರಿಯ ನಟ ದತ್ತಣ್ಣ, ಗರುಡ ರಾಮ್, ಚಿಕ್ಕಣ್ಣ, ಶೋಭರಾಜ್, ಶಿವರಾಜ್ ಕೆ.ಆರ್. ಪೇಟೆ, ಬಿಗ್​ ಬಾಸ್​ ವಿನ್ನರ್​ ಮಂಜು ಪಾವಗಡ, ನಿಹಾರಿಕಾ ಸೇರಿದಂತೆ ಅನೇಕರು ಬಣ್ಣ ಹಚ್ಚಿದ್ದಾರೆ. ವಿಜಯ್​ ಕುಮಾರ್​ ಕೊಂಡ ನಿರ್ದೇಶನ ಮಾಡಿದ್ದು, ಚಂದ್ರು ಮನೋಹರನ್​ ಹಾಗೂ ಸುನೀಲ್​ ಗೌಡ ನಿರ್ಮಾಣ ಮಾಡಿದ್ದಾರೆ. ಅರ್ಜುನ್​ ಜನ್ಯ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

****

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles