ಸ್ಯಾಂಡಲ್‌ವುಡ್‌ನ ಹಿರಿಯ ನಿರ್ದೇಶಕ ಕೆ.ವಿ.ರಾಜು ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8ಕ್ಕೆ ಅವರು ಇಹಲೋಕ ತ್ಯಜಿಸಿದ್ದಾರೆ. ಹುಲಿಯಾ, ಬೆಳ್ಳಿ ಮೋಡ, ಇಂದ್ರಜಿತ್, ಬೆಳ್ಳಿ ಕಾಲುಂಗುರ, ಯುದ್ಧಕಾಂಡ ಸೇರಿ ಹಲವು ಚಿತ್ರಗಳನ್ನು ಅವರು ನಿರ್ದೇಶಿಸಿದ್ದರು. ಹಿಂದಿಯಲ್ಲಿ ಅಮಿತಾಬ್ ಬಚ್ಚನ್ ಚಿತ್ರಕ್ಕೂ ಅವರು ನಿರ್ದೇಶಿಸಿದ್ದರು.

ಅನಾರೋಗ್ಯದ ಕಾರಣ ಕೆಲವು ದಿನಗಳಿಂದ ಮನೆಯಲ್ಲಿಯೇ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ರಾಜಾಜಿನಗರದ ನಿವಾಸದಲ್ಲಿ ಬೆಳಗ್ಗೆ 8 ಗಂಟೆಗೆ ನಿಧನರಾಗಿದ್ದಾರೆ. ರಾಜಾಜಿನಗರದ ನಿವಾಸದಲ್ಲಿ ರಾಜು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.