ಇತ್ತೀಚೆಗೆ ಸಂಸದ ತೇಜಸ್ವಿ ಸೂರ್ಯ, ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಯಿಂದ ಸಾಕಷ್ಟು ವಿವಾದ ಸೃಷ್ಟಿಯಾಗಿತ್ತು, ನಂತರ ಹೇಳಿಕೆ ನೀಡಿದ 24 ಗಂಟೆಯೊಳಗೆ ಬಿಜೆಪಿ ಸಂಸದ ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಯಾಚನೆ ಮಾಡಿದ್ರು.
ಈ ಹೇಳಿಕೆಗೆ ನಟಿ ರಮ್ಯಾ ತಮ್ಮದೇ ಶೈಲಿಯಲ್ಲಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ, ತೇಜಸ್ವಿ ಸೂರ್ಯ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಭಾಷಣ ಮಾಡುತ್ತಿರುವ ವಿಡಿಯೋದ ಝಲಕ್ನ್ನು ಹಂಚಿಕೊಂಡು ಅವರ ತಲೆಯಲ್ಲಿ ಮೆದುಳೇ ಇಲ್ಲವೆಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.
ಕನ್ನಡ ಚಿತ್ರರಂಗದಲ್ಲಿ ಒಂದು ದಶಕಗಳ ಕಾಲ ಸ್ಯಾಂಡಲ್ ವುಡ್ ಕ್ವೀನ್, ಮೋಹಕ ತಾರೆಯಾಗಿ ಬೆಳ್ಳಿತೆರೆ ಮೇಲೆ ವಿಜೃಂಭಿಸಿದ ನಟಿ ರಮ್ಯಾ ಅವರು ಸದ್ಯಕ್ಕೆ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೂ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ಸಖತ್ ಆಕ್ಟೀವ್ ಆಗಿದ್ದು, ತಮ್ಮ ದಿನಚರಿ ವಿಷಯಗಳ ಬಗ್ಗೆ ಮಾಹಿತಿಯನ್ನು ಅಭಿಮಾನಿಗಳ ಜತೆ ಹಂಚಿಕೊಳ್ಳುತ್ತಿರುತ್ತಾರೆ. ಇತ್ತೀಚೆಗಷ್ಟೇ ‘ಆ ದಿನಗಳು’ ಖ್ಯಾತಿಯ ನಟ ಚೇತನ್ ಕುಮಾರ್ ಅವರ ಹೊಸ ಸಿನಿಮಾ ‘100 ಕ್ರೋರ್ಸ್’ ಚಿತ್ರದ ಟೀಸರ್ ಲಾಂಚ್ ಮಾಡಿದ್ದರು. ಇದೀಗ ರಮ್ಯಾ ಅವರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬುರುಡೇಲಿ ಮೆದುಳೇ ಇಲ್ಲವೆಂದು ಹೇಳಿದ್ದಾರೆ.
****