18.9 C
Bengaluru
Tuesday, February 7, 2023
spot_img

13 ನೇ ಅಂತರಾಷ್ಟ್ರೀಯ ಚಿತ್ರೋತ್ಸವ, ಸ್ಪರ್ಧಾ ವಿಭಾಗಕ್ಕೆ ಸಿನಿಮಾ ಸಲ್ಲಿಸುವ ಅವಧಿ ವಿಸ್ತರಣೆ

ಬೆಂಗಳೂರು 13 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವನ್ನು 2022 ನೇ ಫೆಬ್ರವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿರುವ ವಿಷಯ ಎಲ್ಲರಿಗೂ ಗೊತ್ತೇ ಇದೆ. ಆದರೆ ಹಿಂದೆ ಸಿನಿಮಾಗಳನ್ನು ಸಲ್ಲಿಸಲು ಇದ್ದ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಚಲನ ಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನಾಂಕ ವಿಸ್ತರಣೆ

13 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಸಿನಿಮಾಗಳನ್ನು ಸಲ್ಲಿಸಲು ಕೊನೆ ದಿನಾಂಕವನ್ನು ಈ ಹಿಂದೆ ಡಿಸೆಂಬರ್ 27ರ ಳಗೆ ಕಳುಹಿಸುವಂತೆ ಹೇಳಲಾಗಿತ್ತು. ಮತ್ತೀಗ ಸಿನಿಮಾಗಳ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು ಕಡೆಯ ದಿನಾಂಕ 2022ರ ಜನವರಿ 8 ರ ವರಗೆ ವಿಸ್ತರಿಸಲಾಗಿದೆ.

ಈ ಚಿತ್ರೋತ್ಸವದ ಸ್ಪರ್ಧಾತ್ಮಕ ವಿಭಾಗಕ್ಕೆ ಕಥಾಚಿತ್ರಗಳನ್ನು ಆಹ್ವಾನಿಸಲಾಗಿದೆ. ಏಷಿಯನ್, ಭಾರತೀಯ ಹಾಗೂ ಕನ್ನಡದ ಎಲ್ಲ ಉಪಭಾಷಾ ಚಲನಚಿತ್ರಗಳೂ ಸೇರಿದಂತೆ ಕನ್ನಡ ಸಿನಿಮಾಗಳು ಸ್ಪರ್ಧಾತ್ಮಕ ವಿಭಾಗದಲ್ಲಿರುತ್ತವೆ. ಪ್ರತಿಯೊಂದು ವಿಭಾಗದಲ್ಲೂ ಪ್ರಶಸ್ತಿ ವಿಜೇತ ಚಲನಚಿತ್ರಗಳಿಗೆ ನಗದು, ಸ್ಮರಣ ಫಲಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುತ್ತದೆ.

ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರವೇಶ ಪಡೆಯಲು ಕಥಾಚಿತ್ರಗಳು 1, ಜನವರಿ 2021 ರಿಂದ 31 ಡಿಸೆಂಬರ್ 2021 ರ ಅವಧಿಯನ್ನು ಪರಿಗಣಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ಕಾಲಾವಧಿಯಲ್ಲಿ ನಿರ್ಮಾಣಗೊಂಡ ಸಿನಿಮಾಗಳಾಗಿರಬೇಕು ಹಾಗೂ 70 ನಿಮಿಷದ ಅವಧಿಯ ಚಲನಚಿತ್ರವಾಗಿರಬೇಕು.

ಕನ್ನಡ ಹಾಗೂ ಕರ್ನಾಟಕದ ಉಪಭಾಷೆಗಳಲ್ಲಿ ಮತ್ತು ಇತರೆ ಭಾರತೀಯ ಭಾಷೆಗಳಲ್ಲಿ ತಯಾರಾದ ಚಿತ್ರಗಳ ನಿರ್ಮಾಣದ ದಿನಾಂಕವನ್ನು ಭಾರತ ಸರ್ಕಾರದ ಸೆಂಟ್ರಲ್ ಬೋರ್ಡ್ ಆಫ್ ಫಿಲಂ ಸರ್ಟಿಫಿಕೇಷನ್ ನೀಡಿದ ದಿನಾಂಕವನ್ನು ಆಧರಿಸಿ ಗಣನೆಗೆ ತೆಗೆದುಕೊಳ್ಳಲಾಗುವುದು. ಚಲನಚಿತ್ರಗಳನ್ನು ಸಲ್ಲಿಸಲು ಅನುಸರಿಸಬೇಕಾದ ನಿಯಮಾವಳಿ ಹಾಗೂ ಮಾರ್ಗಸೂಚಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಧಿಕೃತ ವೆಬ್ ಸೈಟ್ Biffes.org ನಲ್ಲಿ ನೀಡಲಾಗಿದೆ.

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles