ಮರಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ಅಭಿನಯದ ಆಕ್ಷನ್ ಪ್ರಧಾನ ಸಿನಿಮಾ ವರದ ಇದೇ ಫೆ.18ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಈಗಾಗ್ಲೆ “ವರದ” ಸಿನಿಮಾ ವೀಕ್ಷಿಸಿರೋ ಪ್ರಾದೇಶಿಕ ಸೆನ್ಸಾರ್ ಮಂಡಳಿ, ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ. ʻರಾಬರ್ಟ್ʼ ಚಿತ್ರದ ನಂತರ ರಿಲೀಸ್ ಆಗ್ತಿರೋ ವಿನೋದ್ ಪ್ರಭಾಕರ್ ನಟಿಸಿರುವ ಈ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ವರದ ಸಿನಿಮಾವನ್ನು ಉದಯ ಪ್ರಕಾಶ್ ನಿರ್ಮಿಸಿ, ನಿರ್ದೇಶಿಸಿದ್ದಾರೆ.


ಕೆ.ಕಲ್ಯಾಣ್ , ನಂದೀಶ್ ಹಾಗೂ ಚೇತನ್ ಕುಮಾರ್ ಈ ಚಿತ್ರಕ್ಕೆ ಹಾಡುಗಳನ್ನು ಬರೆದಿದ್ದು, ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ವಿನಾಯಕರಾಮ್ ಸಂಭಾಷಣೆ ಭಜರಂಗಿ ಆನಂದ್ ಛಾಯಾಗ್ರಹಣ ಈ ಸಿನಿಮಾಕ್ಕಿದೆ. ಸಾಹಸ ನಿರ್ದೇಶಕ ಡಿಫರೆಂಟ್ ಡ್ಯಾನಿ, ವಿಕ್ರಂ ಮೋರ್ ಹಾಗೂ ಅಶ್ರಫ್ ಗುರ್ಕಲ್ ಈ ಸಿನಿಮಾಕ್ಕೆ ಭರ್ಜರಿ ಸ್ಟಂಟ್‌ಗಳನ್ನು ಕಂಪೋಸ್ ಮಾಡಿದ್ದಾರೆ.
ವಿನೋದ್ ಪ್ರಭಾಕರ್ ಅವರ ತಂದೆ ಪಾತ್ರದಲ್ಲಿ ಹಿರಿಯ ನಟ ಚರಣ್ ರಾಜ್ ನಟಿಸಿದ್ದಾರೆ. ಅಮಿತ ಈ ಚಿತ್ರದ ನಾಯಕಿ. ಅನಿಲ್ ಸಿದ್ದು, ಎಂ.ಕೆ.ಮಠ, ಅಶ್ವಿನಿ ಗೌಡ, ಗಿರೀಶ್ ಜತ್ತಿ, ಪ್ರಶಾಂತ್ ಸಿದ್ದಿ, ರಾಧ ರಂಗನಾಥ್, ರಾಜೇಶ್ವರಿ, ದುರ್ಗ, ಮಾನಸ, ಅರವಿಂದ್, ರೋಬೊ ಗಣೇಶ್, ಲೋಕೇಶ್, ನಮನ, ರಾಮಸ್ವಾಮಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.