ಬಹಳ ಅದ್ದೂರಿಯಾಗಿ ‘ಗಂಧದ ಗುಡಿ’ (Gandhada Gudi) ಪ್ರೀ-ರಿಲೀಸ್ ಇವೆಂಟ್ ಮಾಡಲಾಗುತ್ತಿದೆ. ‘ಪುನೀತ ಪರ್ವ’ (Puneetha Parva) ಎಂಬ ಹೆಸರಿನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಇಂದು (ಅ.21) ಸಂಜೆ 6 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಪರಭಾಷೆಯ ಅನೇಕ ಸೆಲೆಬ್ರಿಟಿಗಳು ಭಾಗಿ ಆಗಲಿದ್ದಾರೆ. ಈ ಸಲುವಾಗಿ ಕಾಲಿವುಡ್ ನಟ ಸೂರ್ಯ (Suriya) ಅವರು ಈಗಾಗಲೇ ಬೆಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ ಅನೇಕ ಸ್ಟಾರ್ ಕಲಾವಿದರು ಆಗಮಿಸುವ ನಿರೀಕ್ಷೆ ಇದೆ. ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
Puneetha Parva Gandhada Gudi Pre Release Event: ಲಕ್ಷಾಂತರ ಅಭಿಮಾನಿಗಳ ಸಮ್ಮುಖದಲ್ಲಿ ‘ಪುನೀತ ಪರ್ವ’ ಕಾರ್ಯಕ್ರಮ ನಡೆಯಲಿದೆ.