ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ…
ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದ ತುಂಬುವಂತೆ ಮಾಡಿದೆ…
ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ…ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದ್ದೆ. ಇತ್ತೀಚಿನ ವರ್ಷಗಳಲ್ಲಿ.. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸೋಕೆ ವಿಜೃಂಭಿಸೋಕೆ ಶುರು ಮಾಡಿದ್ದರಿಂದ…

ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟು ಹಬ್ಬದಂದು ನಿಮ್ಮನ್ನ ನೋಡಬೇಕು.. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದೆ.. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ…ನಿಮಗಾಗಿ ವಿಭಿನ್ನವಾಗಿರೋದನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ..ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟುಹಬ್ಬದ ನಿಮ್ಮ ಉಡುಗೊರೆ…ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ ಅದರ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ.
ನಿಮ್ಮ ಪ್ರೀತಿಯ ಯಶ್