29.4 C
Bengaluru
Sunday, February 5, 2023
spot_img

ಕೋಮಲ್ ಕುಮಾರ್ “ಕಾಲಾಯ ನಮಃ” ಚಿತ್ರದಲ್ಲಿ ಪ್ರಕಾಶ್ ರೈ

ತಮ್ಮ ಅಮೋಘ ನಟನೆಯ ಮೂಲಕ ಜನಪ್ರಿಯರಾಗಿರುವ ನಟ ಕೋಮಲ್ ಕುಮಾರ್, ಐದು ವರ್ಷಗಳ ನಂತರ ನಾಯಕರಾಗಿ ನಟಿಸುತ್ತಿರುವ ಚಿತ್ರ “ಕಾಲಾಯಾ ನಮಃ”.

ಪ್ರಸ್ತುತ ಈ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ. ಈಗ ಮತ್ತೊಂದು ಖುಷಿಯ ವಿಚಾರವೆಂದರೆ, ತಮ್ಮ ನಟನೆಯ ಮೂಲಕ ಭಾರತದಾದ್ಯಂತ ಹೆಸರು ಮಾಡಿರುವ ಬಹುಭಾಷಾ ನಟ ಪ್ರಕಾಶ್ ರೈ ” ಕಾಲಾಯಾ ನಮಃ” ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆಪ್ರಕಾಶ್ ರೈ ಅವರ ಅಭಿನಯದ ಸನ್ನಿವೇಶಗಳ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ.

ಅನುಸೂಯ ಕೋಮಲ್ ಕುಮಾರ್ ನಿರ್ಮಿಸುತ್ತಿರುವ ಈ ಚಿತ್ರವನ್ನು ಮತಿವಣನ್ ನಿರ್ದೇಶಿಸುತ್ತಿದ್ದಾರೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಕೋಮಲ್ ಕುಮಾರ್, ಆಸಿಯಾ ಫಿರ್ದೋಸ್, ಪ್ರಕಾಶ್ ರೈ, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related Articles

Stay Connected

10,000FansLike
15,000FollowersFollow
5,000FollowersFollow
100,000SubscribersSubscribe

Latest Articles