92ನೇ ವಸಂತಕ್ಕೆ ಕಾಲಿಟ್ಟ ಭಾರತ ರತ್ನ ‘ಲತಾ ಮಂಗೇಶ್ಕರ್’

ಭಾರತೀಯ ಚಿತ್ರರಂಗದ ಲೆಜೆಂಡರಿ ಗಾಯಕಿ ಲತಾ ಮಂಗೇಶ್ಕರ್​ ಅವರು ಇಂದು (ಸೆ.28) 92ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಿನಿಮಾ ಸಂಗೀತ ಲೋಕದಲ್ಲಿ ಅಪಾರ ಸಾಧನೆ ಮಾಡಿದ ಈ ಮಹಾನ್​ ಸಿಂಗರ್​ಗೆ ಕೋಟ್ಯಂತರ ಅಭಿಮಾನಿಗಳಿಂದ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಸಾವಿರಾರು ಸೂಪರ್​ ಹಿಟ್​ ಹಾಡುಗಳಿಗೆ ಧ್ವನಿಯಾದ ಲತಾ ಮಂಗೇಶ್ಕರ್​ ಅವರಿಗೆ ಸಾಟಿ ಬೇರಾರೂ ಇಲ್ಲ. ಅನೇಕ ಸೆಲೆಬ್ರಿಟಿಗಳು ಕೂಡ ಅವರಿಗೆ ವಿಶ್​ ಮಾಡುತ್ತಿದ್ದಾರೆ.

ಪ್ರತಿ ವರ್ಷ ಸಾಮಾಜಿಕ ಜಾಲತಾಣಗಳ ಮೂಲಕ ಲೆಜೆಂಡರಿ ಹಿನ್ನೆಲೆ ಗಾಯಕಿಗೆ ಹುಟ್ಟು ಹಬ್ಬದ ಶುಭಾಶಯ ಕೋರುವ ಪ್ರಧಾನಿ ಮೋದಿ, ಈ ವರ್ಷ ದೇವರು ನಿಮಗೆ ಇನ್ನೂ ಹೆಚ್ಚಿನ ಆಯುಷ್ಯ ಮತ್ತು ಆರೋಗ್ಯ ದಯಪಾಲಿಸಲಿ ಎಂದೂ ಪ್ರಧಾನಿ ತಮ್ಮ ಸಂದೇಶದಲ್ಲಿ ಶುಭ ಹಾರೈಸಿದ್ದಾರೆ.

ಲತಾ ಮಂಗೇಶ್ಕರ್ ಅವರ ಸುಮಧುರ ಧ್ವನಿ ಪ್ರಪಂಚದಾದ್ಯಂತ ಪ್ರತಿಧ್ವನಿಸುತ್ತದೆ. ವಿನಮ್ರತೆ ಮತ್ತು ಭಾರತೀಯ ಸಂಸ್ಕೃತಿಯ ಬಗೆಗಿನ ಉತ್ಸಾಹಕ್ಕಾಗಿ ಅವರನ್ನು ಗೌರವಿಸಲಾಗುತ್ತದೆ. ವೈಯಕ್ತಿಕವಾಗಿ ಅವರ ಆಶೀರ್ವಾದವು ದೊಡ್ಡ ಶಕ್ತಿಯ ಮೂಲವಾಗಿದೆ. ಲತಾ ದಿದಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

****

Exit mobile version