new updates News news updates ಪಿಚ್ಚರ್ EXCLUSIVE ಪಿಚ್ಚರ್ SPECIAL ಪಿಚ್ಚರ್ stories ಪಿಚ್ಚರ್ UPDATE

“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ!

“ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ!
  • PublishedFebruary 3, 2026

ಇತ್ತೀಚಿಗೆ ಬಿಡುಗಡೆ ಕಂಡ ಲ್ಯಾಂಡ್ ಲಾರ್ಡ್ ಸಿನಿಮಾವು ಈಗಾಗಲೇ ಜನರ ಮನಸ್ಸನ್ನು ಯಶಸ್ವಿಯಾಗಿ ಗೆಲ್ಲುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಅವರು ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ವಿಚಾರವಾಗಿ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಪ್ರಸ್ತಾಪಿಸಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ “ಸಾಮಾಜಿಕ ಅಸಮಾನತೆ ಮತ್ತು ಜಾತಿಯಾಧಾರಿತ ಶೋಷಣೆ ವಿಷಯಾಧಾರಿತ ದುನಿಯಾ ವಿಜಯ್ ನಾಯಕತ್ವದ “ಲ್ಯಾಂಡ್ ಲಾರ್ಡ್” ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಮೌಲ್ಯಯುತ ಸಂದೇಶವನ್ನು ಜನರಿಗೆ ತಲುಪಿಸಿ, ಸಾರ್ವತ್ರಿಕ ಅಭಿಪ್ರಾಯ ರೂಪಿಸಲು ಹಾಗೂ ಸಾಮಾಜಿಕ ಪರಿವರ್ತನೆಯನ್ನು ಸಾಧಿಸಲು ಸಿನೆಮಾಗಳು ಅತ್ಯಂತ ಪರಿಣಾಮಕಾರಿ ಮಾಧ್ಯಮ ಎನ್ನುವುದು ನನ್ನ ಭಾವನೆ.

ಸಾಮಾಜಿಕ ಕಳಕಳಿಯ ಸಿನೆಮಾವನ್ನು ಮಾಡಿದಾಗ ಅಂಥವರ ಜೊತೆ ನಿಂತು ಬೆನ್ನು ತಟ್ಟಬೇಕಿರುವುದು ಕೂಡ ಸರ್ಕಾರವಾಗಿ ನಮ್ಮ ನೈತಿಕ ಹೊಣೆ. ಮುಂದಿನ ದಿನಗಳಲ್ಲಿ ಸಾಮಾಜಿಕ ವ್ಯವಸ್ಥೆಯ ಮೇಲೆ ಬೆಳಕು ಚೆಲ್ಲುವ ಲ್ಯಾಂಡ್ ಲಾರ್ಡ್ ನಂತಹ ಇನ್ನಷ್ಟು ಚಿತ್ರಗಳು ಮೂಡಿಬರಲು ನಮ್ಮ ಈ ನಿರ್ಧಾರ ಸ್ಪೂರ್ತಿಯಾಗಲಿದೆ ಎಂದು ನಂಬಿದ್ದೇನೆ”. ಎಂದು ಬರೆದು ಹಾಕಿಕೊಂಡಿದ್ದಾರೆ.

Written By
Kannada Picchar

Leave a Reply

Your email address will not be published. Required fields are marked *