News

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಉಮೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಉಮೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
  • PublishedOctober 11, 2021

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಉಮೇಶ್ ಹೆಗ್ಡೆ ಇಂದು (ಅಕ್ಟೋಬರ್ 11) ನಿಧನ ಹೊಂದಿದ್ದಾರೆ. ಅವರು ಹೃದಯಾಘಾತದ ಕಾರಣದಿಂದ ನಿನ್ನೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಉಮೇಶ್ ಪಾರ್ಥಿವ ಶರೀರವನ್ನು ಅವರ ನಿವಾಸದಲ್ಲಿ ಇಡಲಾಗಿದೆ. ಕುಟುಂಬ ಸದಸ್ಯರ ಹಾಗೂ ಸ್ನೇಹಿತರ ಅಂತಿಮ ದರ್ಶನದ ಬಳಿಕ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದು ಎಂದು ತಿಳಿಸಲಾಗಿದೆ.

ಕನ್ನಡ ಚಿತ್ರರಂಗದ ಗಣ್ಯರು ಉಮೇಶ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಉಮೇಶ್ ಹೆಗ್ಡೆ ಅವರಿಗೆ 71 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ. ಉಮೇಶ್, ಹಲವಾರು ಧಾರಾವಾಹಿಗಳು ಸಹಿತ ಸಿನಿಮಾಗಳಲ್ಲಿ ಕೂಡ ನಟಿಸಿದ್ದರು. ಅವರು ರಂಗಭೂಮಿ ಕಲಾವಿದರೂ ಆಗಿದ್ದರು. ಉಮೇಶ್ ಹೆಗಡೆ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿಯವರು. ಅವರ ನಿಧನ ವಾರ್ತೆಯನ್ನು ಪುತ್ರ ಆದರ್ಶ್ ಹೆಗ್ಡೆ ಸಾಮಾಜಿಕ ಜಾಲತಾಣಗಳಲ್ಲಿ ಖಚಿತಪಡಿಸಿದ್ದಾರೆ.

****

Written By
Kannadapichhar

Leave a Reply

Your email address will not be published. Required fields are marked *