‘ಮದಗಜ’ ಚಿತ್ರದ ಅಪ್ ಡೇಟ್ಸ್..!
ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹುನಿರೀಕ್ಷಿತ ‘ಮದಗಜ’ ಸಿನಿಮಾದ ಟೀಸರ್ ಅನ್ನು ಕನ್ನಡದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಲಾಗಿತ್ತು. ಇದೀಗ ತೆಲುಗು ಹಾಗೂ ತಮಿಳಿನಲ್ಲಿ ಈ ಟೀಸರ್ ಅನ್ನು ರಿಲೀಸ್ ಮಾಡಲಿದ್ದಾರೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ಡಿಸೆಂಬರ್ ನಲ್ಲಿ ಚಿತ್ರ ತೆರೆ ಕಾಣುವುದಾಗಿ ಚಿತ್ರ ತಂಡ ಮಾಹಿತಿ ನೀಡಿದೆ. ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಆಶಿಕಾ ರಂಗನಾಥ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಜಗಪತಿ ಬಾಬು, ದೇವಯಾನಿ, ಶಿವರಾಜ್ ಕೆ.ಆರ್. ಪೇಟೆ, ಚಿಕ್ಕಣ್ಣ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಈ ಚಿತ್ರ ರಿಲೀಸ್ ಆಗಲಿದೆ.
****