ಅನ್ನದಾನದ ನಡುವೆ ಕುಸಿದು ಬಿದ್ದ ಪೊಲೀಸ್ ಸಬ್ ಇನ್ಸ್ ಪೆಕ್ಟರ್
ಪುನೀತ್ ರಾಜಕುಮಾರ್ ಹೆಸರಿನಲ್ಲಿ ದೊಡ್ಮನೆ ಕುಟುಂಬ ಆಯೋಜಿಸಿರುವ ಅನ್ನದಾನ ಕಾರ್ಯಕ್ರಮ ಬಿಗಿ ಪೊಲೀಸ್ ಕಾವಲಿನಲ್ಲಿ ನಡೆಯುತ್ತಿದೆ ಈಗಾಗಲೇ ಸಾವಿರಾರು ಅಭಿಮಾನಿಗಳು ಊಟ ಸ್ವೀಕರಿಸಿದ್ದಾರೆ ಈ ನಡುವೆ ಕರ್ತವ್ಯದಲ್ಲಿದ್ದ ಪೋಲೀಸ್ ಅಧಿಕಾರಿಯೊಬ್ಬರು ದಿಢೀರ್ ಕುಸಿದ್ದು ಬಿದ್ದಿದ್ದಾರೆ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದ್ದಾರೆ ಡಿಸಿಪಿ ಅನುಚೇತ್.
ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ ಅವರು ಅಗಲಿ ಇಂದಿಗೆ (ನವೆಂಬರ್ 9) 12 ದಿನಗಳಾಗಿವೆ. ಈ ಕಾರಣಕ್ಕೆ ದೊಡ್ಮನೆ ಕುಟುಂಬ ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡುತ್ತಿದೆ. ಪುನೀತ್ ರಾಜ್ಕುಮಾರ್ ಹೆಸರಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.
20 ಸಾವಿರ ಜನರಿಗೆ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿದ್ದು. 5 ಸಾವಿರ ಜನರಿಗೆ ಸಸ್ಯಾಹಾರಿ ಊಟಕ್ಕೆ ವ್ಯವಸ್ಥೆ ನಡೆಸಲಾಗುತ್ತಿದೆ. ಒಟ್ಟು 25 ಸಾವಿರ ಜನಕ್ಕೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ. ಈಗಾಗಲೇ ಸಾವಿರಾರು ಅಭಿಮಾನಿಗಳು ಊಟ ಮಾಡುತ್ತಿದ್ದಾರೆ, ಊಟದ ಸಂದರ್ಭದಲ್ಲಿ ನೂಕುನುಗ್ಗಲು ಆಗದಿರಲಿ ಎನ್ನುವ ಕಾರಣಕ್ಕೆ ಅರಮನೆ ಮೈದಾನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
****