ಪುನೀತ್ ರಾಜಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ “ಖುಷ್ಬೂ”
ಇಂದು (ನವೆಂಬರ್ 9) ಖುಷ್ಬೂ ಬೆಂಗಳೂರಿನಲ್ಲಿರುವ ಪುನೀತ್ ರಾಜ್ಕುಮಾರ್ ಮನೆಗೆ ಆಗಮಿಸಿದ್ದರು. ಈ ವೇಳೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಿವರಾಜ್ಕುಮಾರ್ ಕೂಡ ಇದ್ದರು.
ಖುಷ್ಬೂ ಅವರು ಸಂಜೆ ವೇಳೆಗೆ ಪುನೀತ್ ನಿವಾಸಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಅವರು ಸದಾಶಿವ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅಶ್ವಿನಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ಅವರು. ಇದರ ಜತೆಗೆ ಶಿವರಾಜ್ಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಈ ಮೊದಲು ಸಾಕಷ್ಟು ಪರಭಾಷೆಯ ನಟರು ಶಿವಣ್ಣ, ಪುನೀತ್ ಮನೆಗೆ ಬಂದು ಸಾಂತ್ವನ ಹೇಳುವ ಕೆಲಸ ಮಾಡಿದ್ದರು.
****