ತಾಯ್ತನದ ಫೋಟೋ ಶೂಟ್ ಮೂಲಕ ಗುಡ್ ನ್ಯೂಸ್ ನೀಡಿದ ಅಮೂಲ್ಯ ದಂಪತಿ!
ಸ್ಯಾಂಡಲ್ ವುಡ್ ಗೆ ಬಾಲನಟಿಯಾಗಿಯೇ ಕಾಲಿಟ್ಟವರು ಅಮೂಲ್ಯ. ನಂತರ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಬಡ್ತಿ ಪಡೆದುಕೊಂಡರು. ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ಹೀರೋಯಿನ್ ಆಗಿ ಮಿಂಚಿದರು. ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಕೃಷ್ಣ ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಅವರು ಜೋಡಿಯಾಗಿ ನಟಿಸಿದರು. ‘ನಾನು ನನ್ನ ಕನಸು’ ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್ ರೈ ಜತೆ ತೆರೆಹಂಚಿಕೊಂಡು ಮೆಚ್ಚುಗೆ ಗಳಿಸಿದರು. ಹೀಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇರುವಾಗಲೇ ಅವರು 2017ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಸದ್ಯ ನಟಿ ಅಮೂಲ್ಯ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ. ತಾವು ಪ್ರೆಗ್ನೆಂಟ್ ಎಂಬ ವಿಚಾರವನ್ನು ಅವರು ಬಹಿರಂಗಪಡಿಸಿದ್ದಾರೆ. ಪತಿ ಜಗದೀಶ್ ಜತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು, ಸೋಶಿಯಲ್ ಮೀಡಿಯಾ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ದಂಪತಿಗೆ ಎಲ್ಲರೂ ಶುಭಕೋರುತ್ತಿದ್ದಾರೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಅಮೂಲ್ಯ ಅವರು ಇತ್ತೀಚಿನ ದಿನಗಳಲ್ಲಿ ಯಾವುದೇ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳುತ್ತಿರಲಿಲ್ಲ. ಸಂಸಾರದ ಕಡೆಗೆ ಅವರು ಹೆಚ್ಚು ಗಮನ ನೀಡಿದ್ದಾರೆ. ಈಗ ಅವರು ತಾಯಿ ಆಗುತ್ತಿರುವ ಸುದ್ದಿ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಸದ್ಯ ಅವರ ಹೊಸ ಈ ಫೋಟೋ ಅಭಿಮಾನಿಗಳ ವಲಯದಲ್ಲಿ ಸಖತ್ ವೈರಲ್ ಆಗುತ್ತಿದೆ.

ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಜತೆ ಅಮೂಲ್ಯ ಮದುವೆ 2017ರಲ್ಲಿ ನೆರವೇರಿತು. ಈಗ ಈ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ. ಈ ಗುಡ್ ನ್ಯೂಸ್ ನೀಡಲು ಅವರು ಮಾಡಿಸಿರುವ ಫೋಟೋಶೂಟ್ ಗಮನ ಸೆಳೆಯುತ್ತಿದೆ.

2017ರಲ್ಲಿ ತೆರೆಕಂಡ ‘ಮುಗುಳು ನಗೆ’ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಅವರು ಪೂರ್ಣ ಪ್ರಮಾಣದಲ್ಲಿ ಹೀರೋಯಿನ್ ಆಗಿ ನಟಿಸಿದ ಕೊನೇ ಸಿನಿಮಾ ‘ಮಾಸ್ತಿಗುಡಿ’.
****