News

ಸಿಲಿಕಾನ್ ಸಿಟಿಯಲ್ಲಿ 83 ಚಿತ್ರ ತಂಡದಿಂದ ಸುದ್ದಿಗೋಷ್ಠಿ

ಸಿಲಿಕಾನ್ ಸಿಟಿಯಲ್ಲಿ 83 ಚಿತ್ರ ತಂಡದಿಂದ ಸುದ್ದಿಗೋಷ್ಠಿ
  • PublishedDecember 18, 2021

ಬೆಂಗಳೂರಿನಲ್ಲಿ ಇಂದು (ಡಿ.18) 83 ಚಿತ್ರದ ಪ್ರೆಸ್ ಮೀಟ್ ನಡೆಯುತ್ತಿದೆ ಈ ಕಾರ್ಯಕ್ರಮದಲ್ಲಿ ಕಪಿಲ್ ದೇವ್, ರಣ್ವೀರ್, ಕಿಚ್ಚ ಸುದೀಪ್ ಭಾಗವಹಿಸಲಿದ್ದಾರೆ.ಬೆಳ್ಳಿ ಪರದೆ ಮೇಲೆ ಭಾರತೀಯ ಕ್ರಿಕೆಟ್‌ ಇತಿಹಾಸದ ರೋಚಕ ಕಥೆ ರಣವೀರ್ ಸಿಂಗ್ ನಟನೆಯ 83 ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಡಿಸೆಂಬರ್ 24 ರಂದು ರಿಲೀಸ್

ಕರ್ನಾಟಕದ ಸಿನಿ‌ ಪ್ರೇಕ್ಷಕರಿಗೆ 83 ಸಿನಿಮಾ ಅರ್ಪಿಸೋಕೆ ಮುಂದಾದ ಕಿಚ್ಚ ಸುದೀಪ್ ಸಿಲಿಕಾನ್ ಸಿಟಿಯಲ್ಲಿ 83 ಚಿತ್ರ ತಂಡದಿಂದ ಸುದ್ದಿಗೋಷ್ಠಿ ಕೆಲವೇ ಕ್ಷಣಗಳಲ್ಲಿ 83 ಸಿನಿಮಾದ ಸುದ್ದಿಗೋಷ್ಠಿ ಶುರುವಾಗಲಿದೆ 1983 ವಿಶ್ವಕಪ್ ಗೆದ್ದ ರೋಚಕ ಸ್ಟೋರಿಯೇ 83 ಕಪಿಲ್ ದೇವ್ ಪಾತ್ರದಲ್ಲಿ ರಣವೀರ್ ಸಿಂಗ್ ಮಿಂಚಿದ್ದಾರೆ.

ಕಬೀರ್ ಖಾನ್ ನಿರ್ದೇಶನದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ ಇದೇ ಡಿಸೆಂಬರ್ 24ಕ್ಕೆ ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಗ್ರ್ಯಾಂಡ್ ರಿಲೀಸ್ ಆಗ್ತಿದೆ. ಹಿಂದಿಯಲ್ಲಿ ತಯಾರಾಗಿರುವ ‘83’ ಸಿನಿಮಾ ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಭಾಷೆಗೆ ಡಬ್​ ಆಗಿ ತೆರೆಕಾಣುತ್ತಿದೆ.

ಈ ಚಿತ್ರವನ್ನು ಕಣ್ತುಂಬಿಕೊಳ್ಳಲು ಸಿನಿಪ್ರಿಯರು ಹಲವು ತಿಂಗಳಿಂದ ಕಾಯುತ್ತಿದ್ದರು. ಮೊದಲ ಲಾಕ್​ ಡೌನ್​ ಶುರುವಾಗುವುದಕ್ಕೂ ಮುನ್ನವೇ ಈ ಸಿನಿಮಾ ರಿಲೀಸ್​ಗೆ ಸಿದ್ಧವಾಗಿತ್ತು. ಆದರೆ ಲಾಕ್​ಡೌನ್​ ಜಾರಿಯಾದ ಬಳಿಕ ಬಿಡುಗಡೆ ದಿನಾಂಕ ಮುಂದೂಡಿಕೊಳ್ಳುವುದು ಅನಿವಾರ್ಯ ಆಗಿತ್ತು. ರಣವೀರ್​ ಸಿಂಗ್​ ನಟನೆಯ ಈ ಚಿತ್ರ ಈಗ ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು ಡಿ.24ರಂದು ತೆರೆ ಕಾಣಲಿದೆ. ಕಿಚ್ಚ ಸುದೀಪ್​ ಅವರು ಕೂಡ ಈಗ ಈ ಚಿತ್ರತಂಡಕ್ಕೆ ಸಾಥ್​ ನೀಡಿದ್ದಾರೆ. ಅಂದರೆ, ಕನ್ನಡದಲ್ಲಿ ‘83’ ಸಿನಿಮಾವನ್ನು ಸುದೀಪ್​ ಅರ್ಪಿಸುತ್ತಿದ್ದಾರೆ.

ಕಪಿಲ್​ ದೇವ್​ ಪಾತ್ರದಲ್ಲಿ ನಟಿಸಲು ರಣವೀರ್​ ಸಿಂಗ್​ ತುಂಬ ಶ್ರಮಪಟ್ಟಿದ್ದಾರೆ. ಟೀಸರ್​ ಮತ್ತು ಪೋಸ್ಟರ್​ಗಳಲ್ಲಿ ಅವರ ಲುಕ್​ ಗಮನ ಸೆಳೆದಿದೆ. ಕರ್ನಾಟಕದಲ್ಲಿ ಶಾಲಿನಿ ಆರ್ಟ್ಸ್ ಹಾಗೂ ರಿಲಯನ್ಸ್ ಎಂಟರ್​ಟೇನ್ಮೆಂಟ್​ ಸಂಸ್ಥೆಗಳು ವಿತರಣೆಯ ಜವಾಬ್ದಾರಿಯನ್ನು ಹೊತ್ತುಕೊಂಡಿವೆ. ದೀಪಿಕಾ ಪಡುಕೋಣೆ, ಕಬೀರ್ ಖಾನ್, ವಿಷ್ಣು ವರ್ಧನ್ ಇಂದುರಿ, ಸಾಜಿದ್ ನಾಡಿಯದ್ವಾಲ, ಫಾಂಟಮ್ ಫಿಲ್ಮ್ಸ್ ಹಾಗೂ 83 ಫಿಲ್ಮ್ ಲಿಮಿಟೆಡ್ ಮೂಲಕ ಈ ಚಿತ್ರ ನಿರ್ಮಾಣ ಆಗಿದೆ.

****

Written By
Kannadapichhar

Leave a Reply

Your email address will not be published. Required fields are marked *