ಭಾರತೀಯ ಸಿನಿಮಾರಂಗದ ಗಾನಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ

ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನರಾಗಿದ್ದಾರೆ..
_92 ವಯಸ್ಸಾಗಿದ್ದ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು… ಲತಾ ಮಂಗೇಶ್ಕರ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು.ಎಷ್ಟೇ ಪ್ರಯತ್ನಿಸಿದರು ಚಿಕಿತ್ಸೆ ಫಲಕಾರಿಯಾಗದೆ ಲತಾ ಮಂಗೇಶ್ಕರ್ ಬೆಳಿಗ್ಗೆ 8ಗಂಟೆ 12 ನಿಮಿಷಕ್ಕೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ..
ಮಧ್ಯಪ್ರದೇಶದ ಇಂದೋರ್ ನಲ್ಲಿ ಜನಿಸಿದ ಲತಾ ಮಂಗೇಶ್ಕರ್ ದೀನನಾಥ್ ಮಂಗೇಶ್ಕರ್ ಸೇವಂತಿ ಮಂಗೇಶ್ಕರ್ ದಂಪತಿಯ ಪುತ್ರಿಯಾಗಿದ್ದರು…
ಭಾರತದ 36 ಭಾಷೆಗಳಲ್ಲಿ ಹಾಡಿದ ಲತಾ ಮಂಗೇಶ್ಕರ್ ಕೆಲ ವಿದೇಶಿ ಭಾಷೆಗಳಲ್ಲೂ ಹಾಡು ಹಾಡಿದ್ದಾರೆ …ಐವತ್ತು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಲತಾ ಅವನನಿಧನ ಭಾರತೀಯ ಸಿನಿಮಾರಂಗಕ್ಕೆ ತುಂಬಲಾರದ ನಷ್ಟವಾಗಿದೆ..