ಪಿಚ್ಚರ್ UPDATE

ಗ್ಯಾಂಗ್ ಸ್ಟಾರ್ ಅವತಾರದಲ್ಲಿ ವಿಕ್ರಂ ರವಿಚಂದ್ರನ್‌, ಹೊಸ ಚಿತ್ರ ಶುರು..!

ಗ್ಯಾಂಗ್ ಸ್ಟಾರ್ ಅವತಾರದಲ್ಲಿ ವಿಕ್ರಂ ರವಿಚಂದ್ರನ್‌, ಹೊಸ ಚಿತ್ರ ಶುರು..!
  • PublishedDecember 12, 2022
  • ಸೆಟ್ಟೇರಿತು ವಿಕ್ರಮ್ ರವಿಚಂದ್ರನ್ 2ನೇ ಸಿನಿಮಾ
  • ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ವಿಕ್ರಂ ತೆರೆಗೆ

‘ತ್ರಿವಿಕ್ರಮ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಟ್ಟ ಕ್ರೇಜಿ ಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು, ಚಿತ್ರದ ಮುಹೂರ್ತ ಸರಳವಾಗಿ ನೆರವೇರಿದೆ.

ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್
ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದ್ದು, ರಾ ಹಾಗೂ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಎರಡನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ವಿಕ್ರಮ್ ತೆರೆ ಮೇಲೆ ಮಿಂಚಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದಾರೆ. ಕನ್ನಡದಲ್ಲಿ ‘ಹೆಡ್ ಬುಷ್’ ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಕಾರ್ತಿಕ್ ರಾಜನ್ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.

ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು ಸದ್ಯದಲ್ಲೇ ಟೈಟಲ್, ತಾರಾಬಳಗ, ತಂತ್ರಜ್ಞರು ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕ ಕಾರ್ತಿಕ್ ರಾಜನ್ ತಿಳಿಸಿದ್ದಾರೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದಾರೆ.

Written By
kiranbchandra