ಬಡವ ರಾಸ್ಕಲ್ ಭರ್ಜರಿ ಓಪನಿಂಗ್

ಬಡವಾ ರಾಸ್ಕಲ್ ಇಂದು ರಾಜಾದ್ಯಂತ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾನೆ. ಬಡವ ರಾಸ್ಕಲ್ ಭರ್ಜರಿ ಓಪನಿಂಗ್ ಸಿಕ್ಕಿದ್ದು ರಿಲೀಸ್ ಆದ ಬಹುತೇಕ ಕಡೆ ಹೌಸ್ ಫುಲ್ ಪ್ರದರ್ಶನ ಕಾಣಿದೆ. ಡಾಲಿ ಪಿಚ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗಿರುವ ‘ಬಡವ ರಾಸ್ಕಲ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ ಶಂಕರ್ ಗುರು. ಈ ಸಿನಿಮಾದಲ್ಲಿ ಧನಂಜಯ್ ಗೆ ನಾಯಕಿಯಾಗಿ ಅಮೃತಾ ಐಯಂಗಾರ್ ಇದ್ದರೆ, ತಾರಾ ಅನುರಾಧ-ರಂಗಾಯಣ ರಘು, ನಾಗಭೂಷಣ್‌, ಪೂರ್ಣಚಂದ್ರ ಮುಂತಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ..

YouTube player

ಬಡವ ರಾಸ್ಕಲ್ ಚಿತ್ರದ ಪ್ರಚಾರ ಶಾಲಾ ಮಕ್ಕಳಿಂದ ಹಿಡಿದು ತರಕಾರಿ ಅಂಗಡಿ, ಮಾಂಸದ ಅಂಗಡಿ, ದಿನಸಿ ಅಂಗಡಿ, ಆಸ್ಪತ್ರೆ ರಶೀದಿ ಚೀಟಿ, ಕಾರು ಗ್ಯಾರೇಜ್, ಆಟೋ ಚಾಲಕರವರೆಗೂ ಬಹಳ ವರ್ಗಗಳಲ್ಲಿ ದುಡಿಯುವ ಅಭಿಮಾನಿಗಳು ‘ಬಡವ ರಾಸ್ಕಲ್’ ಚಿತ್ರಕ್ಕೆ ವಿಭಿನ್ನ ರೀತಿಯಲ್ಲಿ ಪ್ರಚಾರ ಮಾಡಿದ್ದರು.

ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳ ಸುತ್ತ ನಡೆಯುವ ಈ ಚಿತ್ರದಲ್ಲಿ ಧನಂಜಯ್‌ ಆಟೋ ಡ್ರೈವರ್‌ ಆಗಿ ಕಾಣಿಸಿಕೊಡಿದ್ದು ‘ಡಾಲಿ ಪಿಕ್ಚರ್’ ಬ್ಯಾನರ್‌ನಲ್ಲಿ ಸಾವಿತ್ರಮ್ಮ ಅಡವಿ ಸ್ವಾಮಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಶಂಕರ್‌ ಗುರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. 

Exit mobile version