ಡಿಸೆಂಬರ್ 24 ಕ್ರಿಸ್ಮಸ್ ಗೆ ಬರ್ತಿದ್ದಾನೆ ‘ಬಡವ ರಾಸ್ಕಲ್’

ಸ್ಯಾಂಡಲ್ ವುಡ್ ನಲ್ಲಿ ಡಾಲಿ ಧನಂಜಯ್ ಎಂದರೆ ಅಭಿಮಾನಿಗಳಿಗೆ ಬಹಳ ಕ್ರೇಜ್ , ‘ಟಗರು’ ಸಿನಿಮಾದ ಡಾಲಿ ಪಾತ್ರದ ಮೂಲಕ ಸಖತ್ ಸೌಂಡ್ ಮಾಡಿದ್ದ ನಟ ಧನಂಜಯ್ ಈಗ ಸ್ಯಾಂಡಲ್ ವುಡ್ ನ ಬ್ಯುಸಿ ನಟರಾಗಿದ್ದಾರೆ. ಡಾಲಿ ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ಬಗ್ಗೆ ಸ್ವತಃ ನಟ ಡಾಲಿ ಧನಂಜಯ್ ತಮ್ಮ ಟ್ವೀಟರ್ ಖಾತೆಯಲ್ಲಿ ಚಿತ್ರದ ಪೋಸ್ಟರ್ ಸಹಿತ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 24 ಕ್ರಿಸ್ಮಸ್ ಗೆ ರಾಜ್ಯಾದ್ಯಂತ ತೆರೆ ಕಾಣಲಿರುವ ‘ಬಡವ ರಾಸ್ಕಲ್’ ಚಿತ್ರವು ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ಧನಂಜಯ್ ಹೇಳಿರುವಂತೆಯೇ ಇದು ಮಿಡಲ್ ಕ್ಲಾಸ್ ಹುಡುಗನೊಬ್ಬನ ಕಥೆಯಾಗಿದ್ದು, ಪೋಸ್ಟರ್, ಟೀಸರ್ ಮತ್ತು ಟ್ರೈಲರ್ ಮೂಲಕ ಗಮನ ಸೆಳೆದಿದೆ. ಸಹಾಯಕ ನಿರ್ದೇಶಕರಾಗಿದ್ದ ಗುರು ಶಂಕರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಯುವ ಗಾಯಕ ವಾಸುಕಿ ವೈಭವ್ ಸಂಗೀತ ನೀಡಿದ್ದಾರೆ.
ಚಿತ್ರದಲ್ಲಿ ಧನಂಜಯ್ ಜೊತೆ ನಟಿ ಅಮೃತಾ ಅಯ್ಯಂಗಾರ್ ತೆರೆ ಹಂಚಿಕೊಂಡಿದ್ದಾರೆ. ‘ಪಾಪ್‌ಕಾರ್ನ್ ಮಂಕಿ ಟೈಗರ್’ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಧನಂಜಯ್ ಜೊತೆ ಗುಜ್ಮಾಲ್ ಪುರುಷೋತ್ತಮ್ ಬಂಡವಾಳ ಹೂಡಿದ್ದಾರೆ. ‘ಡಾಲಿ’ ಸಾಮ್ರಾಟನಾಗಿ ದಕ್ಷ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡು ಹವಾ ಸೃಷ್ಟಿಸಿರೋ ಸಲಗ ಚಿತ್ರ ಇದೇ ಅ 14 ರಂದು ರಿಲೀಸ್ ಆಗ್ತಿದೆ ಈಗಿರುವ ಸಾಮ್ರಾಟ ನ ಹೈಪ್ ನೋಡಿದ್ರೆ ಡಾಲಿ ಧನಂಜಯ್ ಅವರ ‘ಬಡವ ರಾಸ್ಕಲ್’ ಚಿತ್ರ ಕೂಡ ಸಕ್ಸಸ್ ಆಗೋದ್ರಲ್ಲಿ ಡೌಟೇ ಇಲ್ಲಾ.
****