ನವೆಂಬರ್ ಗೆ ಸಖತ್ ಆಗಿ ಬರ್ತಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್..!

ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಸಖತ್ ಸಿನಿಮಾ ನವೆಂಬರ್ 12ಕ್ಕೆ ರಿಲೀಸ್ ಆಗಲಿದೆ. ಸಿನಿಮಾ ನಿರ್ಮಾಣ ಮಾಡಿರುವ ಕೆವಿಎನ್ ಪ್ರೊಡಕ್ಷನ್ ಅಕ್ಟೋಬರ್ 24 ರಂದು ಸಿನಿಮಾ ಬಿಡುಗಡೆ ಸಂಬಂಧ ಅಧಿಕೃತ ಮಾಹಿತಿ ನೀಡಲಿದೆ, ಅದೇ ದಿನ ಸಿನಿಮಾ ಟೀಸರ್ ಕೂಡ ರಿಲೀಸ್ ಆಗಲಿದೆ.

ಚಮಕ್ ಸಿನಿಮಾ ನಂತರ ಗಣೇಶ್ ಮತ್ತು ಸುನಿ ಕಾಂಬಿನೇಷನ್ ನ ಎರಡನೇ ಸಿನಿಮಾ ಇದಾಗಿದೆ. ಸಿನಿಮಾ ರಿಯಾಲಿಟಿ ಶೋ ಅಧರಿಸಿದ ಕಥೆಯಾಗಿದೆ. ಗಣೇಶ್ ಸಿನಿಮಾದಲ್ಲಿ ಅಂಧನ ಪಾತ್ರದಲ್ಲಿ ನಟಿಸಿದ್ದಾರೆ. ನಿಶ್ವಿಕಾ ನಾಯ್ಡು ಕೂಡ ಸಿನಿಮಾದಲ್ಲಿ ಕುರುಡಿ ಪಾತ್ರದಲ್ಲಿ ನಟಿಸಿದ್ದಾರೆ, ನಟಿ ಸುರಭಿಗೆ ಇದು ಚೊಚ್ಚಲ ಸಿನಿಮಾವಾಗಿದೆ.

ಜೂಡಾ ಸ್ಯಾಂಡಿ ಸಂಗೀತ, ಮತ್ತು ಸಂತೋಷ್ ರೈ ಪಾತಾಜೆ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮಾಳವಿಕಾ ಅವಿನಾಶ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

****

Exit mobile version