ಕನ್ನಡ ದ್ವಜ ಸುಟ್ಟ ಕಿಡಿಗೇಡಿಗಳ ವಿರುದ್ದ ಗುಡುಗಿದ ಚಾಲೆಂಜಿಂಗ್ ಸ್ಟಾರ್ ಮತ್ತು ಆಕ್ಷನ್ ಪ್ರಿನ್ಸ್

ಎಂಇಎಸ್‌ ನವರು ಪ್ರತಿಭಟನಾ ರ್‍ಯಾಲಿ ಮಾಡಿ, ಕನ್ನಡ ಪರ ಹೋರಾಟಗಾರರ ಮೇಲೆ ಕೊಲೆ ಯತ್ನ ದೂರು ದಾಖಲಿಸಿದರು. ಪ್ರತಿಭಟನೆ ವೇಳೆ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.  ಪೊಲೀಸರು ಕನ್ನಡಪರ ಹೋರಾಟಗಾರ ಸಂಪತ್‌ ಕುಮಾರ್ ಹಾಗೂ ಇನ್ನಿಬ್ಬರನ್ನು ಬಂಧಿಸಿದ್ದಾರೆ. ಕನ್ನಡ ಬಾವುಟ ಸುಟ್ಟಿರುವುದು ಮತ್ತು ಕನ್ನಡ ಹೋರಾಟಗಾರರನ್ನೆ ಪೊಲೀಸರು ಬಂಧಿಸಿರುವುದು ಈಗ ಗಂಭೀರ ಸ್ವರೂಪ ಪಡೆದುಕೊಂಡಿದೆ. ಕನ್ನಡ ಸಿನಿಮಾ ತಾರೆಯರು ಪ್ರಕರಣದ ವಿರುದ್ದ ದ್ವನಿ ಎತ್ತಿದ್ದಾರೆ.
ಕನ್ನಡ ದ್ವಜ ಕ್ಕೆ ಬೆಂಕಿ ಹಚ್ಚಿರುವ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ್ದಾರೆ ಸ್ಯಾಂಡಲ್ ವುಡ್ ನ ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ “ಭಾಷೆ ಅನ್ನೋದು ಒಂದು ನಾಡಿನ ಸ್ವಾಭಿಮಾನದ ಪ್ರತೀಕ.ಕನ್ನಡಧ್ವಜ ನಮ್ಮ ಸಂಸ್ಕೃತಿಯ ತಿಲಕ. ಕನ್ನಡಧ್ವಜ ವನ್ನು ಸುಟ್ಟಿದ್ದು ತೀವ್ರ ಬೇಸರ ತರಿಸಿದೆ! ಸರ್ಕಾರ ಈಕೂಡಲೇ ಇಂತಹ ನಾಡದ್ರೋಹಿಗಳ ಮೇಲೆ ನಿರ್ದಾಕ್ಷಿಣ್ಯಕ್ರಮ ಕೈಗೊಂಡು ಕನ್ನಡಿಗರ ಸ್ವಾಭಿಮಾನವನ್ನು ರಕ್ಷಿಸಬೇಕೆನ್ನುವುದು ನನ್ನಂತ ಕೋಟ್ಯಾಂತರ ಕನ್ನಡಿಗರ ಒತ್ತಯ ಜೈಆಂಜನೇಯ” ಎಂದು ಆಕ್ರೋಶ ವ್ಯಕ್ತ ಪಡಿಸಿದಾರೆ.

ಕನ್ನಡ ಬಾವುಟ ಸುಟ್ಟವರ ವಿರುದ್ಧ ನಟ ದರ್ಶನ್‌ ಟ್ವೀಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕಾಗಿ ವಿನಂತಿ” ಎಂದು ಬರೆದುಕೊಂಡು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಪ್ರತಿಭಟನೆ ವೇಳೆ ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದರ ವಿರುದ್ಧ ಭಾರಿ ಆಕ್ರೋಶ ವ್ಯಕ್ತ ಆಗುತ್ತಿದೆ. ಕನ್ನಡಿಗರು ಇದರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈಗ ಸಾಲು ಸಾಲಾಗಿ ಸಿನಿಮಾ ತಾರೆಯರು ಕೂಡ ಈ ಘಟನೆಯ ವಿರುದ್ಧ ಗುಡುಗುತ್ತಲಿದ್ದಾರೆ.

****

Facebook
Exit mobile version