ಮಲಯಾಳಂ ಚಲನಚಿತ್ರ ನಟ ನೆಡುಮುಡಿ ವೇಣು ಇನ್ನಿಲ್ಲ

ಮಲಯಾಳಂ ಚಲನಚಿತ್ರ ನಟ ನೆಡುಮುಡಿ ವೇಣು ಅವರು ಸೋಮವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ. ಅವರಿಗೆ 73 ವರ್ಷ ವಯಸ್ಸಾಗಿತ್ತು.
ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಇಹಲೋಕ ತ್ಯಜಿಸಿದರು ಎಂದು ಮೂಲಗಳು ಹೇಳಿವೆ.
ನೆಡುಮುಡಿ ಅವರು ರಂಗಭೂಮಿ ಕಲಾವಿದರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದರು. 1978ರಲ್ಲಿ ಜಿ.ಅರವಿಂದನ್ ಅವರ ‘ಥಂಬು’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗ ಪ್ರವೇಶಿಸಿದರು.ನಟ ನೆಡುಮುಡಿ ವೇಣು ಅವರು ಮಲಯಾಳಂ ಚಿತ್ರರಂಗದಲ್ಲಿ ತಮ್ಮ 40 ವರ್ಷಗಳ ಸುದೀರ್ಘ ಸಿನಿ ಪಯಣದಲ್ಲಿ ಹಲವು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.ವೇಣು ಅವರ ನಿಧನಕ್ಕೆ ಇಡೀಮಲಯಾಳಂ ಚಿತ್ರರಂಗ ಕಂಬನಿ ಮಿಡಿದಿದೆ.