News

‘ಪ್ರೇಮಂ ಪೂಜ್ಯಂ’ ಚಿತ್ರದ ಟ್ರೈಲರ್ ಅ.14 ಕ್ಕೆ ರಿಲೀಸ್..!

‘ಪ್ರೇಮಂ ಪೂಜ್ಯಂ’ ಚಿತ್ರದ ಟ್ರೈಲರ್ ಅ.14 ಕ್ಕೆ ರಿಲೀಸ್..!
  • PublishedOctober 9, 2021

ಈಗಾಗಲೇ ಹಾಡುಗಳಿಂದಲೇ ಸಾಕಷ್ಟು ಸದ್ದು ಮಾಡಿರುವ ನೆನಪಿರಲಿ ಪ್ರೇಮ್ ಅಭಿನಯದ 25ನೇ ಸಿನಿಮಾ ‘ಪ್ರೇಮಂ ಪೂಜ್ಯಂ’ ಟ್ರೈಲರ್ ಇದೇ ತಿಂಗಳು ಅಕ್ಟೋಬರ್‌ 14ರಂದು ರಿಲೀಸ್ ಆಗುತ್ತಿದೆ. ಈ ಕುರಿತು ಪ್ರೇಮ್ ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ರಾಘವೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಸುಮಾರು 14 ಹಾಡುಗಳಿವೆ. ಈಗಾಗಲೇ 10 ಹಾಡುಗಳು ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿ ಧೂಳೆಬ್ಬಿಸಿವೆ. ಈ ಸಿನಿಮಾದಲ್ಲಿ ಬೃಂದಾ ಆಚಾರ್ಯ ಹಾಗೂ ಐಂದ್ರಿತಾ ರೇ ನಾಯಕಿಯಾಗಿ ಅಭಿನಯಿಸಿದ್ದು, ಕೆದಂಬಾಡಿ ಕ್ರಿಯೇಷನ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಅಕ್ಟೋಬರ್ 29 ಕ್ಕೆ ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

****

Written By
Kannadapichhar

Leave a Reply

Your email address will not be published. Required fields are marked *