‘ಪುಷ್ಪಾ’ ಚಿತ್ರದ ಎರೆಡನೇ ಹಾಡು ಅ.13ಕ್ಕೆ ರಿಲೀಸ್

ಟಾಲಿವುಡ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಸುಕುಮಾರ್ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ ‘ಪುಷ್ಪ’ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ.ಈ ಚಿತ್ರದ ಮೊದಲನೇ ಹಾಡನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ್ದರು. ಕನ್ನಡ ವರ್ಷನ್ ನಲ್ಲಿ ಸ್ಯಾಂಡಲ್ ವುಡ್ ನ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಗೂಡಿಸಿದ್ದರು.
ಅಲ್ಲು ಅರ್ಜುನ್ ಅವರ ಇಂಟ್ರಡಕ್ಷನ್ ಹಾಡಾಗಿತ್ತು. ಇದೀಗ ಮತ್ತೊಂದು ಲಿರಿಕಲ್ ಸಾಂಗ್ ರಿಲೀಸ್ ಆಗಲಿದೆ. 5 ಭಾಷೆಗಳಲ್ಲಿ ಈ ಹಾಡು ಅಕ್ಟೋಬರ್ 13 ರಂದು ಬಿಡುಗಡೆಯಾಗಲಿದೆ. ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದು, ಶ್ರೀವಲ್ಲಿ ಎಂಬ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಮಿಂಚಲಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ ಡಿಸೆಂಬರ್ 25ರಂದು ಈ ಸಿನಿಮಾ ಬಿಡುಗಡೆ ಮಾಡುವುದಾಗಿ ತಿಳಿಸಿದ್ದ ಚಿತ್ರತಂಡ ಇದೀಗ ಡಿಸೆಂಬರ್ 17ರಂದು ರಿಲೀಸ್ ಮಾಡಲು ನಿರ್ಧರಿಸಿದೆ.
****