ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ಆತ್ಮೀಯ ಗೆಳೆಯ ಬಾಲಿವುಡ್ ನಟ ಸಲ್ಮಾನ್‍ಖಾನ್ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ಬಾಲಿವುಡ್ ಬಾಯ್ ಜಾನ್ ನಟ ಸಲ್ಮಾನ್ ಖಾನ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 56 ನೇ ವಸಂತಕ್ಕೆ ಕಾಲಿಟ್ಟಿರುವ ನಟ ಸಲ್ಮಾನ್ ಖಾನ್‍ಗೆ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಸೋಶಿಯಲ್ ಮೀಡಿಯ ಮೂಲಕ ಶುಭಕೋರಿದ್ದಾರೆ. ಈ ನಡುವೆ ಕಿಚ್ಚ ಸುದೀಪ್ ತಮ್ಮ ಆತ್ಮೀಯ ಗೆಳೆಯ ಸಲ್ಮಾನ್ ಖಾನ್ ಜೊತೆಗಿರುವ ಫೋಟೋವೊಂದನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಹುಟ್ಟುಶುಭಾಶಯ ತಿಳಿಸಿದ್ದಾರೆ.
ವಿಶೇಷವೆಂದರೆ ಸುದೀಪ್ ಶೇರ್ ಮಾಡಿರುವ ಈ ಫೋಟೋ ದಬಾಂಗ್-2 ಸಿನಿಮಾದ ವೇಳೆ ಕ್ಲಿಕ್ಕಿಸಲಾಗಿದ್ದು, ಈ ಫೋಟೋ ಮಧ್ಯೆ ಹುಟ್ಟುಹಬ್ಬದ ಶುಭಾಶಯಗಳು ನನ್ನ ಪ್ರೀತಿಯ ಸಹೋದರ ಎಂದು ಬರೆಯಲಾಗಿದೆ.
****