ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!
ಸ್ಯಾಂಡಲ್ ವುಡ್ ನ ಹಿರಿಯ ನಟ ಶಿವರಾಮ್ ಅವರ ತಲೆಗೆ ಗಂಭೀರವಾಗಿ ಪೆಟ್ಟು ಬಿದ್ದ ಪರಿಣಾಮ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನಿಂದ ಬಿದ್ದು ಗಾಯಗೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವರಾಮ್ ಹೊಸಕೆರೆ ಹಳ್ಳಿ ಬಳಿ ಕಾರಲ್ಲಿ ಹೋಗಿದ್ದ ವೇಳೆ ಘಟನೆ ನಡೆದಿದೆ. ಶಿವರಾಮ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಬ್ರೈನ್ ಗೆ ಬಲವಾದ ಪೆಟ್ಟು ಬಿದ್ದಿದೆ ಸದ್ಯ ಶಿವರಾಮ್ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
84 ವರ್ಷ ವಯಸ್ಸಿನ ಶಿವರಾಮ್ ಅವರ ಅರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ನೀಡಿದ ಹಿರಿಯ ನಟ ಶ್ರೀನಿವಾಸ್ ಮೂರ್ತಿ 4 ದಿನಗಳ ಹಿಂದೆ ಕಾರು ಅಪಘಾತ ಆಗಿತ್ತು.. ಘಟನೆ ನಡೆದು ಮೂರು ದಿನಗಳ ನಂತರ ಗಂಭೀರವಾಗಿದೆ ಎನ್ನಲಾಗಿದೆ. ತಲೆಯ ಭಾಗಕ್ಕೆ ಪೆಟ್ಟಾಗಿದ್ದು, ಸೀತಾ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
****