News

2023ರ ವಿಧಾನಸಭಾ ಚುನಾವಣೆಗೆ ಸಜ್ಜಾಗ್ತಿದ್ದಾರಾ? ನಟ ಶಶಿಕುಮಾರ್..!

2023ರ ವಿಧಾನಸಭಾ ಚುನಾವಣೆಗೆ ಸಜ್ಜಾಗ್ತಿದ್ದಾರಾ? ನಟ ಶಶಿಕುಮಾರ್..!
  • PublishedOctober 26, 2021

ಕನ್ನಡ ಚಿತ್ರರಂಗದ ಹಿರಿಯ ನಟ ಶಶಿಕುಮಾರ್ ಮತ್ತೆ ಅದೃಷ್ಟ ಪರೀಕ್ಷೆಗೆ ಮುಂದಾಗಲಿದ್ದಾರೆಯೇ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿವೆ. ಚಿತ್ರದುರ್ಗ‌ ಜಿಲ್ಲೆಯ 2 ವಿಧಾನಸಭೆ ಕ್ಷೇತ್ರಗಳ ಮೇಲೆ ಶಶಿಕುಮಾರ್ ಕಣ್ಣಿಟ್ಟಿದ್ದು, ಇದರ ಭಾಗವಾಗಿಯೇ ಮೊಳಕಾಲ್ಮೂರು, ಚಳ್ಳಕೆರೆ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಕ್ಷೇತ್ರಗಳು ಪರಿಶಿಷ್ಟ ವರ್ಗಕ್ಕೆ ಮೀಸಲಾಗಿವೆ. ಈ ಹಿನ್ನೆಲೆಯಲ್ಲಿ ಚಳ್ಳಕೆರೆ ಹಾಗೂ ಮೊಳಕಾಲ್ಮೂರಿಗೆ ನಟ ಭೇಟಿನೀಡುತ್ತಿದ್ದಾರೆ.

ಶಶಿಕುಮಾರ್ ನಿನ್ನೆ (ಅಕ್ಟೋಬರ್ 25) ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದರು. ಹಾಗೆಯೇ ಮೊಳಕಾಲ್ಮೂರಿನ ಸಾಯಿಬಾಬ ಮಂದಿರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಅವರಿಗೆ ಅಭಿಮಾನಿಗಳು, ಬೆಂಬಲಿಗರು ಸಾಥ್ ನೀಡಿದ್ದಾರೆ. ಇದೇ ವೇಳೆ ಚಳ್ಳಕೆರೆ ಅಥವಾ ಮೊಳಕಾಲ್ಮೂರಿನಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಶಶಿಕುಮಾರ್ ವ್ಯಕ್ತಪಡಿಸಿದ್ದಾರೆ. ಶಶಿಕುಮಾರ್, ಚಿತ್ರದುರ್ಗದ ಮಾಜಿ ಸಂಸದರಾಗಿದ್ದು, 2008ರಲ್ಲಿ ಚಳ್ಳಕೆರೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪಮತಗಳಿಂದ ಪರಾಭವಗೊಂಡಿದ್ದರು.

****

Written By
Kannadapichhar

Leave a Reply

Your email address will not be published. Required fields are marked *