Featured new updates ಪಿಚ್ಚರ್ stories ಪಿಚ್ಚರ್ UPDATE

ಯಶ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಗೆ ಸಿಗಲಿದೆ ಬಿಗೆಸ್ಟ್ ಸರ್ಪ್ರೈಸ್… ಏನದು..?

ಯಶ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಗೆ ಸಿಗಲಿದೆ ಬಿಗೆಸ್ಟ್ ಸರ್ಪ್ರೈಸ್… ಏನದು..?
  • PublishedJanuary 4, 2026

ಯಶ್ ಹುಟ್ಟುಹಬ್ಬ ಇದೇ ಜನವರಿ 8ಕ್ಕೆ.. ಬಲ್ಲ ಮೂಲಗಳ ಪ್ರಕಾರ ಅದೇ ದಿನ ಟಾಕ್ಸಿಕ್ ಸಿನಿಮಾದ ಟ್ರೈಲರ್ ಬಿಡುಗಡೆ ಆಗಲಿದೆ ಎನ್ನಲಾಗುತ್ತಿದೆ. ಈ ವರೆಗೆ ಟಾಕ್ಸಿಕ್ ಸಿನಿಮಾದ ಪೋಸ್ಟರ್​​ಗಳು ಮಾತ್ರವೇ ಹೊರಬಿದ್ದು ಸದ್ದು ಮಾಡ್ತಿದ್ವು, ಆದರೆ ಸಿನಿಮಾದ ಟೀಸರ್ ಅಥವಾ ಟ್ರೈಲರ್​​ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಯಶ್ ಹುಟ್ಟುಹಬ್ಬ ಹತ್ತಿರದಲ್ಲೇ ಇದ್ದು, ಅದೇ ದಿನ ಟಾಕ್ಸಿಕ್ ಸಿನಿಮಾದ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಯೋಚನೆ ಮಾಡಿದ್ಯಂತೆ..

ಟಾಕ್ಸಿಕ್ ಸಿನಿಮಾದ ಫಸ್ಟ್ ಲುಕ್ ಟೀಸರ್ ಯಶ್ ಅವರ ಹುಟ್ಟುಹಬ್ಬದಂದೇ ಬಿಡುಗಡೆ ಆಗಿತ್ತು. ಈಗ ಮತ್ತೊಮ್ಮೆ ಯಶ್ ಹುಟ್ಟುಹಬ್ಬದಂದೇ ಸಿನಿಮಾದ ಟೀಸರ್ ಅಥವಾ ಟ್ರೈಲರ್ ಬಿಡುಗಡೆ ಆಗುವ ಸಾಧ್ಯತೆ ಇದೆ. ಸಿನಿಮಾದ ನಾಯಕಿಯರಾದ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ ಅವರ ಪಾತ್ರಗಳ ಪೋಸ್ಟರ್​​ಗಳನ್ನು ಚಿತ್ರತಂಡ ಈಗಾಗಲೇ ಹಂಚಿಕೊಂಡಿದೆ. ಈಗ ಸಿನಿಮಾದ ಟೀಸರ್ ಅಥವಾ ಟ್ರೈಲರ್ ಅನ್ನು ಬಿಡುಗಡೆ ಮಾಡುವ ಸಮಯ ಹತ್ತಿರವಾಗಿದೆ. ಯಶ್ ಹುಟ್ಟುಹಬ್ಬಕ್ಕಿಂತಲೂ ಒಳ್ಳೆಯ ಸಮಯ ಸಿಗಲಿಕ್ಕಿಲ್ಲವೇನೊ ಅನ್ತಿದ್ದಾರೆ ಅಭಿಮಾನಿಗಳು..
ಟಾಕ್ಸಿಕ್ ಸಿನಿಮಾವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್​​ದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಿನಿಮಾದ ನಾಯಕನಾಗಿ ಯಶ್ ನಟಿಸಿರುವುದು ಮಾತ್ರವಲ್ಲದೆ ಸಿನಿಮಾದ ಕತೆ ಸಹ ರಚಿಸಿದ್ದಾರೆ. ಕೆವಿಎನ್ ಮತ್ತು ಯಶ್ ಅವರ ಮಾನ್ಸ್​ಸ್ಟರ್ ಮೈಂಡ್ ನಿರ್ಮಾಣ ಸಂಸ್ಥೆಗಳು ಜಂಟಿಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾ ಕನ್ನಡ ಮಾತ್ರವಲ್ಲದೆ ಭಾರತದ ಇತರೆ ಭಾಷೆಗಳ ಜೊತೆಗೆ ಇಂಗ್ಲೀಷ್​​ನಲ್ಲಿಯೂ ಏಕಕಾಲಕ್ಕೆ ನಿರ್ಮಾಣ ಆಗುತ್ತಿದೆ. ಕೆಲವು ಹಾಲಿವುಡ್ ತಂತ್ರಜ್ಞರು ಸಹ ಈ ಸಿನಿಮಾನಲ್ಲಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ಮಾರ್ಚ್ 19 ರಂದು ಪ್ರಪಂಚದಾದ್ಯಂತ ಬಿಡುಗಡೆ ಆಗಲಿದೆ.

Written By
Kannada Picchar

Leave a Reply

Your email address will not be published. Required fields are marked *