ವಾಮನನಾದ ಶೋಕ್ದಾರ್ ಧನ್ವೀರ್

ಬಜಾರ್ ಸಿನಿಮಾ ಮೂಲಕ ಕನ್ನಡ ಸಿನಿ ಪ್ರೇಕ್ಷಕರಿಗೆ ಚಿರಪರಿಚಿತರಾಗಿದ್ದ ಶೋಕ್ದಾರ್ ಧನ್ವೀರ್ ಸದ್ಯ ಬೈ ಟು ಲವ್ ಸಿನಿಮಾ ಸಕ್ಸಸ್ ಖುಷಿಯಲ್ಲಿದ್ದಾರೆ. ಬೈ ಟು ಲವ್ ಸಕ್ಸಸ್ ಯಾತ್ರೆ ಮುಗಿಸಿಕೊಂಡು ಇದೀಗ ವಾಮನ ಸಿನಿಮಾ ಶೂಟಿಂಗ್ ಅಖಾಡಕ್ಕೆ ಧುಮುಕಿದ್ದಾರೆ.ಧನ್ವೀರ್ ಗೌಡ ನಟಿಸ್ತಿರುವ ಮೂರನೇ ಸಿನಿಮಾ ಇದಾಗಿದ್ದು ಸಂಕ್ರಾಂತಿ ಹಬ್ಬದ ಪ್ರಯುಕ್ತ ವಾಮನ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆಯಾಗಿತ್ತು…ಇದೀಗ ವಾಮನ ಸಿನಿಮಾದ ಮುಹೂರ್ತ ಸರಳವಾಗಿ ದೇವನಹಳ್ಳಿಯ ಕತ್ತಿ ಮಾರಮ್ಮ ದೇಗುಲದಲ್ಲಿ ನೆರವೇರಿದೆ.

ವಾಮನ ಸಿನಿಮಾದ ಮುಹೂರ್ತದ ನಂತರ ಚಿತ್ರತಂಡ ಇಂದಿನಿಂದಲೇ ಶೂಟಿಂಗ್ ಶುರು ಮಾಡಿದೆ… ಬೆಂಗಳೂರಿನಲ್ಲಿಯೇ‌ ಮೊದಲ ಹಂತದ ಶೂಟಿಂಗ್ ನಡೆಯುತ್ತಿದ್ದು. ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಅಗಿರುವ ಶಂಕರ್ ರಾಮನ್ ವಾಮನ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿತ್ತಿದ್ದಾರೆ… ಈಕ್ವಿನಾಕ್ಸ್ ಗೋಬಲ್ ಎಂಟರ್ ಟ್ರೈನ್ಮೆಂಟ್ ಪ್ರೊಡಕ್ಷನ್ ನಡಿ ಚೇತನ್ ಕುಮಾರ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಸದ್ಯ ಹೆಚ್ಚಿನ ಮಾಹಿತಿ ಬಿಟ್ಟುಕೊಡಂದ ತಂಡ ಆದಷ್ಟು ಬೇಗ ಸಿನಿಮಾದ ಬಗ್ಗೆ ಇನ್ನಷ್ಟು ಡಿಟೇಲ್ಸ್ ನೀಡಲಿದೆ‌

Exit mobile version