ಮಿತಿ ಮೀರಿದ ಫ್ಯಾನ್ಸ್ ವಾರ್, ಅಭಿಮಾನದ ಹೆಸರಲ್ಲಿ ಕಿರುಕುಳ! ವಿಜಯಲಕ್ಷ್ಮಿ ಪೊಲೀಸರಿಗೆ ದೂರು
ಸೋಶಿಯಲ್ ಮೀಡಿಯಾದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದರ್ಶನ್ ಇದ್ದಾಗ ಯಾರೂ ಮಾತಡ್ತಾ ಇರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್‌ಗಳಲ್ಲಿ ಮಾತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲಾ ಇದ್ರೋ? ಇರಲಿಲ್ವೋ ಎಂದು ಪ್ರಶ್ನಿಸಿ ದಾವಣಗೆರೆಯಲ್ಲಿ ವಿಜಯಲಕ್ಷ್ಮಿ ಹೇಳಿಕೆ ನೀಡಿದ್ದರು.ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ವಿರುದ್ಧ ನಿಂದನೆಗಳ ಪೋಸ್ಟ್ ಪ್ರಕಟವಾಗುತ್ತಿದೆ. ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳು ವಿಜಯಲಕ್ಷ್ಮಿ ಅವರನ್ನು ಮಾತನಾಡಲು ಪ್ರಯತ್ನಿಸಿದವು. ಆದರೆ ವಿಜಯಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡದೇ ಕಾರು ಹತ್ತಿ ತೆರಳಿದರು. ವಿಜಯಲಕ್ಷ್ಮೀ ಖಾತೆಗೆ ಬಂದ ಕಾಮೆಂಟ್ಗಳು ಸುದೀಪ್ ಅಭಿಮಾನಿಗಳದ್ದೇ ಎಂಬ ಅನುಮಾನ ಮೂಡಿದೆ. ಏಕೆಂದರೆ ಕೆಲವು ಖಾತೆಗಳು ಸುದೀಪ್ ಅಭಿಮಾನಿಗಳ ಹೆಸರಲ್ಲಿ ಇದೆ.
ದರ್ಶನ್ ಪತ್ನಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ
ವಿಜಯಲಕ್ಷ್ಮಿ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿ ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ ಅಜಯ್ ಹಿಲೋರಿ ಭೇಟಿಯಾಗಿದ್ದಾರೆ.ಭೇಟಿ ಸಂಬಂಧ ಇದುವರೆಗು ಯಾವುದೇ ಸ್ಪಷ್ಟನೆ ನೀಡಿಲ್ಲ.