ಗಾಳಿಪಟ ಡಬ್ಬಿಂಗ್ ಕಂಪ್ಲೀಟ್..!
ಗಾಳಿಪಟ 2 ಸಿನಿಮಾದಲ್ಲಿ ಗಣೇಶ್, ದಿಗಂತ್, ಪವನ್ ಕುಮಾರ್ ಹಾಗು ಅನಂತ್ ನಾಗ್ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸದ್ಯ ನಿರ್ದೇಶಕ ಯೋಗರಾಜ್ ಭಟ್ ಗಾಳಿಪಟ 2 ಚಿತ್ರದ, ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿ ಇದ್ದು ಡಬ್ಬಿಂಗ್ ಕೆಲಸಗಳನ್ನು ಕಂಪ್ಲೀಟ್ ಮಾಡಿದ್ದಾರೆ.
2008ರಲ್ಲಿ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆದ ಸಿನಿಮಾ ಗಾಳಿಪಟ. ನಿರ್ದೇಶಕ ಯೋಗರಾಜ್ ಭಟ್ ನಿರ್ದೇಶನದ, ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ ಸಿನಿಮಾವನ್ನ ಕನ್ನಡ ಸಿನಿಮಾ ಪ್ರೇಕ್ಷಕರು ಮೆಚ್ಚಿಕೊಂಡಿದ್ದರು. ಈಗ ಸ್ಯಾಂಡಲ್ ವುಡ್ ನಲ್ಲಿ ಗಾಳಿಪಟ 2 ಸಿನಿಮಾ ಬರ್ತಾ ಇದೆ.

ಮುಗುಳು ನಗೆ ಸಿನಿಮಾ ಬಳಿಕ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಗಣೇಶ್ ಕಾಂಬಿನೇಷನ್ ನಲ್ಲಿ ಬರ್ತಾ ಇರೋ ಗಾಳಿಪಟ 2 ಸಿನಿಮಾ, ಕನ್ನಡ ಚಿತ್ರರಂಗದಲ್ಲಿ ಪೋಸ್ಟರ್ ನಿಂದಲೇ ಸಖತ್ ಸದ್ದು ಮಾಡುತ್ತಿದೆ. ಗಾಳಿಪಟ 2 ಸಿನಿಮಾದಲ್ಲಿ ಗಣೇಶ್, ದಿಗಂತ್, ಪವನ್ ಕುಮಾರ್ ಹಾಗೂ ಅನಂತ್ ನಾಗ್ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸದ್ಯ ನಿರ್ದೇಶಕ ಯೋಗರಾಜ್ ಭಟ್ ಗಾಳಿಪಟ 2 ಚಿತ್ರದ, ಶೂಟಿಂಗ್ ಮುಗಿಸಿದ್ದಾರೆ.

ಇನ್ನು ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್, ದೂದ್ ಪೇಡ ದಿಗಂತ್ ಹಾಗೂ ನಿರ್ದೇಶಕ ಪವನ್ ಕುಮಾರ್ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಗಾಳಿಪಟ ಚಿತ್ರದಲ್ಲಿ ನಟಿಸಿದ್ದ ರಾಜೇಶ್ ಕೃಷ್ಣನ್ ಬದಲು, ಲೂಸಿಯ ನಿರ್ದೇಶಕ ಪವನ್ ಕುಮಾರ್ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಪವನ್ ಕುಮಾರ್ ಈ ಹಿಂದೆ ಯೋಗರಾಜ್ ಭಟ್ಟರ ಮನಸಾರೆ ಮತ್ತು ಪಂಚರಂಗಿ ಸಿನಿಮಾಗಳಲ್ಲಿ ನಟಿಸಿದ್ದರು.
ಚಿತ್ರದ ನಾಯಕಿಯರಾಗಿ ವೈಭವಿ, ಸಂಯುಕ್ತ ಮೆನನ್, ಶರ್ಮಿಳಾ ಮಾಂಡ್ರೆ ಕಾಣಿಸಿಕೊಂಡಿದ್ದಾರೆ. ಸಂತೋಷ್ ರೈ ಪಾತಾಜೆ ಸಿನಿಮಾಟೋಗ್ರಫಿ, ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಸಖತ್ ಸಿನಿಮಾದಲ್ಲಿ ಅಭಿನಯಿಸಿದ್ದ ಗಣೇಶ್ ಮಗ ವಿಹಾನ್ ಗಾಳಿಪಟ 2 ಚಿತ್ರದಲ್ಲೂ ಸಹ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಿದ್ದಾನೆ.
****