News

ಅ.14 ಇಂದು ಕೋಟಿಗೊಬ್ಬ 3ಗೆ ಇಲ್ಲ ಬಿಡುಗಡೆಯ ಭಾಗ್ಯ..! ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ನಿರ್ಮಾಪಕ ಸೂರಪ್ಪ ಬಾಬು..!

ಅ.14 ಇಂದು ಕೋಟಿಗೊಬ್ಬ 3ಗೆ ಇಲ್ಲ ಬಿಡುಗಡೆಯ ಭಾಗ್ಯ..! ಅಭಿಮಾನಿಗಳಲ್ಲಿ ಕ್ಷಮೆ ಕೋರಿದ ನಿರ್ಮಾಪಕ ಸೂರಪ್ಪ ಬಾಬು..!
  • PublishedOctober 14, 2021

ಸ್ಯಾಂಡಲ್ ವಡ್ ನಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ-3 ಚಿತ್ರ ನಾಳೆ ಬಿಡುಗಡೆ ಆಗಲಿದೆ ಎಂದು ಚಿತ್ರ ತಂಡ ಘೋಷಿಸಿದೆ. ಈ ಮೂಲಕ ಆಯುಧಪೂಜೆ ದಿನ ಚಿತ್ರ ವೀಕ್ಷಿಸುವ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ ಆಗಿದೆ ಕೋಟಿಗೊಬ್ಬ 3 ಚಿತ್ರದ ನಿರ್ಮಾಪಕರಾದ ಸೂರಪ್ಪ ಬಾಬು ಚಿತ್ರ ಬಿಡುಗಡೆ ಆಗದೇ ಇರುವುದಕ್ಕೆ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

ಸೂರಪ್ಪ ಬಾಬು ಚಿತ್ರ ಬಿಡುಗಡೆ ಆಗದೇ ಇದ್ದಿದ್ದರಿಂದ ಕಿಚ್ಚ ಸುದೀಪ್ ಮತ್ತು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದು, ಅಭಿಮಾನಿಗಳು ತಾಳ್ಮೆ ಕಳೆದುಕೊಳ್ಳದಂತೆ ಮನವಿ ಮಾಡಿದರು.

ಅಕ್ಟೋಬರ್ 14ರಂದು ಚಿತ್ರ ಬಿಡುಗಡೆ ಆಗುವುದಾಗಿ ಚಿತ್ರ ತಂಡ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಕೋಟಿಗೋಬ್ಬ-3 ಚಿತ್ರ ಬಿಡುಗಡೆ ಆಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಚಿತ್ರ ಇಂದು ಬಿಡುಗಡೆ ಆಗುತ್ತಿಲ್ಲ ಎಂದು ಚಿತ್ರ ತಂಡ ಘೋಷಿಸಿದೆ.

ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿದ್ದರಿಂದ ಗುರುವಾರ ಬೆಳಿಗ್ಗೆಯಿಂದಲೇ ಅಭಿಮಾನಿಗಳು ಥಿಯೇಟರ್ ಮುಂದೆ ಜಮಾಯಿಸಿದ್ದರು. ಬೆಳಿಗ್ಗೆ 7 ಗಂಟೆ ಶೋ ಪ್ರಿಂಟ್ ಬಾರದ ಕಾರಣ ರದ್ದುಗೊಳಿಸಲಾಗಿತ್ತು. ಅಲ್ಲದೇ ಬೆಳಿಗ್ಗೆ 10.30ರ ಶೋ ಕೂಡ ರದ್ದುಗೊಂಡಿದ್ದರಿಂದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

****

Written By
Kannadapichhar

Leave a Reply

Your email address will not be published. Required fields are marked *